ರಾಣೆಬೆನ್ನೂರು: ತಾಲ್ಲೂಕಿನ ಚಿಕ್ಕಅರಳಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಕರ ಕೊರತೆಯನ್ನು ಖಂಡಿಸಿ ಬುಧವಾರ ಎಸ್ಡಿಎಂಸಿ ಸದಸ್ಯರು ಮತ್ತು ಮಕ್ಕಳ ಪಾಲಕರು, ಪೋಷಕರು, ಶಿಕ್ಷಣ ಅಭಿಮಾನಿಗಳು ನಾಲ್ಕು ಗಂಟೆಗಳ ಕಾಲ ಶಾಲೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಮಕ್ಕಳ ಸಂಖ್ಯೆ ಅನುಗುಣವಾಗಿ ಸಮರ್ಪಕ ಸಂಖ್ಯೆಯಲ್ಲಿ ಶಿಕ್ಷಕರಿಲ್ಲದ ಕಾರಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ. ಶಾಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

1ನೇ ತರಗತಿಯಿಂದ 8ನೇ ತರಗತಿವರೆಗೆ ಒಟ್ಟು 111 ಮಕ್ಕಳು ಇದ್ದಾರೆ. ಕಾರಣ ಶಿಕ್ಷಕರ ಕೊರತೆಯಿಂದ ಮಕ್ಕಳ ಪಾಠ ಪ್ರವಚನವು ಸಮರ್ಪಕವಾಗಿ ನಡೆಯುತ್ತಿಲ್ಲ. ಇದರಿಂದ ಮಕ್ಕಳ ಶೈಕ್ಷಣಿಕ ಭವಿಷ್ಯದ ಮೇಲೆ ಬಾರಿ ದುಷ್ಪರಿಣಾಮ ಬೀರುತ್ತಿದೆ ಎಂದು ಗ್ರಾಮಸ್ಥರು ಶಾಲೆಯ ಎದುರು ಜಮಾಯಿಸಿ ಶಾಲಾ ಶಿಕ್ಷಣ ಇಲಾಖೆಯ ವಿರುದ್ಧ ಘೋಷಣೆಗಳನ್ನು ಕೂಗಿದರು.

ಚಿಕ್ಕಅರಳೀಹಳ್ಳಿ ಗ್ರಾಮದ ಶಾಲೆಯ ಶಿಕ್ಷಕರ ಕೊರತೆಯ ವಿಚಾರದ ಬಗ್ಗೆ ಶಾಸಕ ಪ್ರಕಾಶ ಕೋಳಿವಾಡ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ಅನೇಕ ಬಾರಿ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಶಿಕ್ಷಕರ ನೇಮಕ ಮಾಡುವವರೆಗೂ ಪ್ರತಿಭಟನೆ ವಾಪಸ್ ಪಡೆಯುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶಾಮಸುಂದರ ಅಡಿಗ ಅವರು ಮಾತನಾಡಿ, ಮಕ್ಕಳ ಭವಿಷ್ಯಕ್ಕಾಗಿ ತಾವೆಲ್ಲರೂ ಸ್ಪಂದಿಸಬೇಕು. ಇಲಾಖೆಯ ನಿಯಮಾನುಸಾರ ಶಿಕ್ಷಕರ ಕೊರತೆಯ ಸಮಸ್ಯೆಯನ್ನು ಮೇಲಧಿಕಾರಿಗಳ ಗಮನಕ್ಕೆ ತಂದು ಕೂಡಲೇ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಕ್ಷೇತ್ರ ಸಮನ್ವಯಾಧಿಕಾರಿ ಮಂಜುನಾಥ, ಬಿಆರ್ಪಿ ಗಂಗಪ್ಪನಾಯಕ ಹಾಗೂ ಸಿಆರ್ಪಿ ಭಾಗವಹಿಸಿದ್ದರು.

ಎಸ್ಡಿಎಂಸಿ ಅಧ್ಯಕ್ಷ ಶಿವಾಜಿ ನನ್ನೂರಿ, ಬಸವರಾಜ ಮಡಿವಾಳರ, ಬಸವರಾಜ ಮೇವುಂಡಿ, ಅಜ್ಜಪ್ಪ ಲಮಾಣಿ, ಬಸವರಾಜ ಮೇವುಂಡಿ,ಮುತ್ತೇಶ ಲಮಾಣಿ, ನಿಂಗರಾಜ ಮೇವುಂಡಿ, ಗೋಣೆಪ್ಪ ಕತ್ತೆಬೆನ್ನೂರ, ದಿನೇಶ ಬೂದಗಟ್ಟಿ ಗ್ರಾಮಸ್ಥರಾದ ಪ್ರಕಾಶ ಶಿವಪುರ, ಲಕ್ಷ್ಮಣ ಲಮಾಣಿ, ಪರಮೇಶ ಬೂದಗಟ್ಟಿ, ಹುಸೇನಸಾಬ ಕೂರಗುಂದ, ವಿಜಯ ಹುಲ್ಯಾಳ, ಲಲಿತಾ ಬಜ್ಜಳ್ಳಿ, ದೇವಿರವ್ವ ಕಜ್ಜರಿ, ನಾಗರಾಜ ಲಮಾಣಿ, ಮಾರುತಿ ಇಟಗಿ, ಸೋಮಶೇಖರ ಲಮಾಣಿ, ರಾಮಣ್ಣ ರಡ್ಡೇರ, ಚಂದ್ರು ಲಮಾಣಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-22-158867218

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.