ರಾಣೆಬೆನ್ನೂರು: ಇಲ್ಲಿನ ಶ್ರೀರಾಮನಗರದ ಸಾಯಿಬಾಬಾ ದೇವ ಸ್ಥಾನದ ಆವರಣದಲ್ಲಿ ಹಿಂದೂ ಸಂಘಟನೆ ಮತ್ತು ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಹಿಂದೂ ಜನಜಾಗೃತಿ ಸಮಿತಿಯಿಂದ ಒಂದು ವಾರಗಳ ಕಾಲ ಆಯೋಜಿಸಲಾದ ಹರ್ ಘರ್ ಯೋಧ ಅಭಿಯಾನದ ಅಂಗ ವಾಗಿ ನಡೆದ ಶೌರ್ಯ ಪ್ರಶಿಕ್ಷಣ ಶಿಬಿರವು ಗುರುವಾರ ಸಮಾರೋಪ ಹಾಗೂ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.

ಹಿಂದೂ ಜನಜಾಗೃತಿ ಸಮಿತಿಯ ವಿಠೋಬಾ ಮಾಲ್ಸೇಕರ ಅವರು ಮಾತನಾಡಿ, ಶಿಬಿರದಲ್ಲಿ ನಗರದ 15 ರಿಂದ 40 ವರ್ಷದ ಯುವಕ-ಯುವತಿಯರು ಉತ್ಸಾಹಭರಿತವಾಗಿ ಭಾಗವಹಿಸಿದ್ದರು. ಶಾರೀರಿಕ ತರಬೇತಿ, ಆತ್ಮರಕ್ಷಣಾ ಕೌಶಲ್ಯಗಳು ಹಾಗೂ ಆಧ್ಯಾತ್ಮಿಕ, ಧಾರ್ಮಿಕ ಮತ್ತು ರಾಷ್ಟ್ರೀಯ ಜಾಗೃತಿ ಕುರಿತ ಮಹತ್ವದ ಮಾರ್ಗದರ್ಶನವನ್ನು ನೀಡಲಾಯಿತು. ಶಿಬಿರದ ಮೂಲಕ ಯುವಕರು, ಯುವತಿಯರಲ್ಲಿ ಧೈರ್ಯ, ಶಿಸ್ತು ಮತ್ತು ದೇಶಭಕ್ತಿ ಮನೋಭಾವವನ್ನು ಬೆಳೆಸುವಲ್ಲಿ ವಿಶೇಷ ಒತ್ತು ನೀಡಲಾಗಿದೆ ಎಂದರು.

ಆನಂತರ ಈ ವಿಶೇಷ ಉಪಕ್ರಮದ ಅಂಗವಾಗಿ ಶಿಬಿರದಲ್ಲಿ ಭಾಗವಹಿಸಿದವರಿಗೆ ತರಬೇತಿ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಹಿಂದೂ ಜನಜಾಗೃತಿ ಸಮಿತಿ ಮುಂದೆಯೂ ಇಂತಹ ಸಮಾಜಮುಖಿ ಹಾಗೂ ರಾಷ್ಟ್ರಭಕ್ತಿಯನ್ನು ಉತ್ತೇಜಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಕೃಷ್ಣಾಸಾ ಪವಾರ ಅವರು ಪೋಷಕರ ಪರವಾಗಿ ಮಾತನಾಡಿ, ಇಂತಹ ಕಾರ್ಯಕ್ರಮಗಳು ಯುವ ಜನತೆಯಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲಿವೆ ಎಂದು ಅಭಿಪ್ರಾಯಪಟ್ಟರು. ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಮನ್ವಯಕ ವೆಂಕಟರಮಣ ನಾಯಕ, ರೂಪಾ ಪವಾರ, ಪೂರ್ಣಿಮಾ ಲದ್ವಾ, ದೀಪಾ, ಅಶೋಕ ಭೋಜ ಹಾಗೂ 40 ಕ್ಕೂ ಹೆಚ್ಚು ಶಿಬಿರಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-22-1374134971

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.