ರಾಣೆಬೆನ್ನೂರು: ತಾಲ್ಲೂಕಿನ ಮಾಳನಾಯಕನಹಳ್ಳಿ ಗ್ರಾಮದಲ್ಲಿ ಶಾಸಕ ಪ್ರಕಾಶ ಕೋಳಿವಾಡ ಅಧ್ಯಕ್ಷತೆಯಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮ ನಡೆಯಿತು.

ಒಟ್ಟು 55 ಅರ್ಜಿಗಳು ಸ್ವೀಕಾರವಾಗಿದ್ದವು. ಅದರಲ್ಲಿ 20 ಅರ್ಜಿಗಳನ್ನು ಕಾರ್ಯಕ್ರಮದಲ್ಲಿಯೇ ವಿಲೇವಾರಿ ಮಾಡಲಾಗಿದೆ. ಕೆಲ ಅರ್ಜಿಗಳಿಗೆ ಹಿಂಬರ ನೀಡಲಾಗಿದೆ ಎಂದು ತಹಶೀಲ್ದಾರ ಆರ್.ಎಚ್.ಭಾಗವಾನ ತಿಳಿಸಿದರು. ತಾಲ್ಲೂಕು ಮಟ್ಟದ 26 ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಆನಂತರ ಶಾಸಕ ಪ್ರಕಾಶ ಕೋಳಿವಾಡ ಮಾತನಾಡಿ, ‘ಶೇ 70 ಅರ್ಜಿಗಳಿಗೆ ಸ್ಥಳದಲ್ಲಿಯೇ ಆದೇಶ ನೀಡುವ ವ್ಯವಸ್ಥೆ ಮಾಡಲಾಗಿದೆ. ಉಳಿದ ಶೇ 30ರಷ್ಟು ಅರ್ಜಿಗಳಿಗೆ ಜಿಲ್ಲಾಡಳಿತ ಮತ್ತು ಸರ್ಕಾರದ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಲಾಗುವುದು. ನಾವೇನು ನಿಮಗೆ ಉಪಕಾರ ಮಾಡುತ್ತಿಲ್ಲ. ನೀವು ನನಗೆ ಮತಹಾಕಿ ಶಾಸಕನಾಗಿ ಆಯ್ಕೆ ಗೊಳಿಸಿದ್ದಕ್ಕೆ ನಿಮ್ಮ ಸೇವೆ ಸಲ್ಲಿಸುತ್ತಿದ್ದೇನೆ‘ ಎಂದರು.

ಗ್ರಾಮ ಪಂಚಾಯಿತಿ, ಅಪ್ಪರ್ ತುಂಗಾ ಯೋಜನೆ ಕಾಲುವೆ ದುರಸ್ತಿ ಮತ್ತು ರೈತರಿಗೆ ಪರಿಹಾರ ಮತ್ತು ಹೆಸ್ಕಾಂ ಇಲಾಖೆಯ ದೂರುಗಳ ಬಗ್ಗೆ ಚರ್ಚೆ ನಡೆಯಿತು.

ತಹಶೀಲ್ದಾರ್ ಆರ್.ಎಚ್.ಭಾಗವಾನ ಅವರು ವೃದ್ಧಾಪ್ಯವೇತನ, ಅಂಗವಿಕಲ, ವಿಧವಾ ವೇತನ, ರೇಶನ್ ಕಾರ್ಡ್, ಅಂಚೆ ಇಲಾಖೆ ಸುಕನ್ಯಾ ಸಮೃದ್ಧಿ ಯೋಜನೆ, ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಆದೇಶ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-22-504934931

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.