ಶನಿವಾರ, ಜನವರಿ 18, 2020
19 °C

ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ ಜೀವಾವಧಿ ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿ ಯಲಿವಾಳ ಗ್ರಾಮದ ಇಮಾಮಸಾಬ್‌ಗೆ ಹಾವೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಕಿರಣಿ ಕಿಣಿ  ಜೀವಾವಧಿ ಶಿಕ್ಷೆ ಮತ್ತು ₹ 20 ಸಾವಿರ ದಂಡ ವಿಧಿಸಿದ್ದಾರೆ. 

ಶಿಗ್ಗಾವಿ ತಾಲ್ಲೂಕು ತಡಸ ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಕಿ ತನ್ನ ಅಣ್ಣನೊಂದಿಗೆ ಅಗಡಿ ತೋಟಕ್ಕೆ ಗೋಡಂಬಿ ಹಣ್ಣು ಬಿಡಿಸಲು ಹೋದಾಗ ಕೂಲಿ ಕಾರ್ಮಿಕ ಯಲಿವಾಳ ಗ್ರಾಮದ ಇಮಾಮಸಾಬ್‌ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಶಿಗ್ಗಾವಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪೋಕ್ಸೋ ಕಾಯ್ದೆಯಡಿ ನ್ಯಾಯಾಧೀಶರು ಶಿಕ್ಷೆ ವಿಧಿಸಿದ್ದಾರೆ. ದಂಡದ ಹಣದಲ್ಲಿ ₹ 10 ಸಾವಿರವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಲು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಸಿದ್ಧಾರೂಢ ಎಂ.ಗೆಜ್ಜಿಹಳ್ಳಿ ವಾದ ಮಂಡಿಸಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು