ಸೋಮವಾರ, ಫೆಬ್ರವರಿ 24, 2020
19 °C

ಅತ್ಯಾಚಾರ: ಅಪರಾಧಿಗೆ 10 ವರ್ಷ ಜೈಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿ, ವಂಚಿಸಿದ್ದ ಅಪರಾಧಿಗೆ ಹಾವೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಕಿರಣ ಕಿಣಿ ಅವರು ಹತ್ತು ವರ್ಷ ಜೈಲು ಶಿಕ್ಷೆ ಮತ್ತು ₹25 ಸಾವಿರ ದಂಡ ವಿಧಿಸಿದ್ದಾರೆ. 

ಹಂಸಭಾವಿ ಠಾಣಾ ವ್ಯಾಪ್ತಿಯ ಲಿಂಗಾಪುರ ಗ್ರಾಮದ ಮಂಜುನಾಥ ಚೌಡಣ್ಣನವರ ಎಂಬುವವನು, ತಮ್ಮ ಹೊಲದ ಕೂಲಿ ಕೆಲಸಕ್ಕೆ ಬರುತ್ತಿದ್ದ ಯುವತಿಯನ್ನು ನಂಬಿಸಿ, ಪದೇ ಪದೇ ಅತ್ಯಾಚಾರ ನಡೆಸಿದ್ದ. ಆರು ತಿಂಗಳ ಗರ್ಭಿಣಿಯಾದ ಯುವತಿ, ಮದುವೆಯಾಗುವಂತೆ ಕೇಳಿದಾಗ, ಜಾತಿ ನಿಂದನೆ ಮಾಡಿ ವಂಚಿಸಿದ್ದ. 

ಹಂಸಭಾವಿ ಠಾಣೆಯಲ್ಲಿ ನೊಂದ ಯುವತಿ ದೂರು ದಾಖಲಿಸಿದ್ದರು. ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸಿದ್ಧಾರೂಢ ಎಂ.ಗೆಜ್ಜಿಹಳ್ಳಿ ವಾದ ಮಂಡಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು