ಶನಿವಾರ, ಮೇ 8, 2021
19 °C

ಲೈಂಗಿಕ ದೌರ್ಜನ್ಯ: ಆರೋಪಿಗೆ ಜೀವಾವಧಿ ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿ ನಾಗಪ್ಪ ಶಿವಪ್ಪ ಮೂಲಿಕೇರಿಗೆ ಒಂದನೇ ಅಧಿಕ ಜಿಲ್ಲಾ ಹಾಗೂ ಸೆಷನ್ಸ್‌ (ಪೋಕ್ಸೊ) ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕಿರಣ ಕಿಣಿ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ.

ಬ್ಯಾಡಗಿ ತಾಲ್ಲೂಕು ಬೆಳಕೇರಿ ಗ್ರಾಮದ ಆರೋಪಿ ನಾಗಪ್ಪ ಶಿವಪ್ಪ ಮೂಲಿಕೇರಿ, ಮಾನಸಿಕ ಹಾಗೂ ಶಾರೀರಿಕವಾಗಿ ದುರ್ಬಲವಾದ ಬಾಲಕಿ ಮೇಲೆ 2018ರ ಫೆಬ್ರುವರಿಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದ. ಆತನ ವಿರುದ್ಧ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್‌ ಚಿದಾನಂದ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಆರೋಪ ಸಾಬೀತಾದ ಕಾರಣ ಕಲಂ 4 ಹಾಗೂ 6 ಪೋಕ್ಸೊ ಕಾಯ್ದೆಯಡಿ ಶಿಕ್ಷೆ ವಿಧಿಸಲಾಗಿದೆ. ಈ ಮೊತ್ತದಲ್ಲಿ ಸಂತ್ರಸ್ತೆಗೆ ₹ 20 ಸಾವಿರ ನೀಡಲು ತೀರ್ಪಿನಲ್ಲಿ ಆದೇಶಿಸಲಾಗಿದೆ. ಪೋಕ್ಸೊ ವಿಶೇಷ ನ್ಯಾಯಾಲಯದ ಸರ್ಕಾರಿ ವಕೀಲರಾದ ವಿನಾಯಕ ಪಾಟೀಲ ವಾದ ಮಂಡಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು