ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬ್ಯಾಡಗಿ: ರಾಷ್ಟ್ರೀಯ ಲೋಕ ಅದಾಲತ್ ಜುಲೈ 13ಕ್ಕೆ

Published 20 ಜೂನ್ 2024, 13:11 IST
Last Updated 20 ಜೂನ್ 2024, 13:11 IST
ಅಕ್ಷರ ಗಾತ್ರ

ಬ್ಯಾಡಗಿ: ಪಟ್ಟಣದ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವನ್ನು ಜುಲೈ 13ರಂದು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ ಎಂದು ಹಿರಿಯ ನ್ಯಾಯಾಧೀಶ ಅಮೋಲ್ ಜೆ. ಹಿರೆಕುಡಿ ತಿಳಿಸಿದರು.

ಪಟ್ಟಣದ ನ್ಯಾಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಾರ್ವಜನಿಕರಿಗೆ ಸಕಾಲದಲ್ಲಿ ನ್ಯಾಯ ಒದಗಿಸಬೇಕು. ಸಣ್ಣಪುಟ್ಟ ಪ್ರಕರಣಗಳಿಗೆ ಸಮಯ ಮತ್ತು ಹಣ ವ್ಯರ್ಥವಾಗಬಾರದು ಎನ್ನುವ ಉದ್ದೇಶದಿಂದ ಲೋಕ ಅದಾಲತ್ ಕಾರ್ಯಕ್ರಮ ಆಯೋಜಿಸಿದೆ’ ಎಂದರು.

‘ಅಪಘಾತ ಪ್ರಕರಣ, ವೈವಾಹಿಕ ಹಾಗೂ ಕೌಟುಂಬಿಕ ಸಮಸ್ಯೆ, ಚೆಕ್ ಬೌನ್ಸ್ ಪ್ರಕರಣ, ಭೂಸ್ವಾಧೀನ ಪ್ರಕರಣ ಸಂಬಂಧಿಸಿದಂತೆ ಇಲ್ಲಿ ಪರಿಹಾರ ಕಂಡುಕೊಳ್ಳಲು ಅವಕಾಶವಿದೆ. ತ್ವರಿತಗತಿಯಲ್ಲಿ ನ್ಯಾಯ ಒದಗಿಸಲು ಉಭಯ ಪಕ್ಷಗಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಿ ಪ್ರಕರಣ ಇತ್ಯರ್ಥಪಡಿಸಲಾಗುವುದು’ ಎಂದು ತಿಳಿಸಿದರು.

‘ನ್ಯಾಯಾಲಯದಲ್ಲಿ ದಾಖಲಾಗದೆ ಇರುವ ಪ್ರಕರಣಗಳನ್ನು ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶವಿದೆ. ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಕಕ್ಷಿದಾರರು ಪಾವತಿಸಿದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು’ ಎಂದರು.

ಕಿರಿಯ ನ್ಯಾಯಾಧೀಶ ಸುರೇಶ ವಗ್ಗನವರ ಮಾತನಾಡಿ, ‘ಮಾಹಿತಿ ಕೊರತೆಯಿದ್ದ ಕಕ್ಷಿದಾರರು ವಕೀಲರಿಂದ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ 08375 229220 ಸಂಪರ್ಕಿಸಬಹುದು’ ಎಂದು ತಿಳಿಸಿದರು.

ವಕೀಲರ ಸಂಘದ ಅಧ್ಯಕ್ಷ ಎಸ್.ಎನ್.ಬಾರ್ಕಿ, ಉಪಾಧ್ಯಕ್ಷ ಬಸಯ್ಯ ಹಿರೇಮಠ, ಕಾರ್ಯದರ್ಶಿ ಎಂ.ಪಿ.ಹಂಜಗಿ, ಪ್ರವೀಣ ಎನ್. ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT