ರಟ್ಟೀಹಳ್ಳಿ: ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಲಾಗುತ್ತಿರುವ ಪಟ್ಟಣದ ಪ್ರವಾಸಿ ಮಂದಿರ, ಹಿರೇಕೆರೂರ ಪ್ರವಾಸಿ ಮಂದಿರ, ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ನಿಲಯಗಳ ಕಟ್ಟಡ ಇದುವರೆಗೂ ಪೂರ್ಣಗೊಂಡಿಲ್ಲ. ಆದರೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶನಿವಾರ ಹಾವೇರಿಯ ಸಾಧನಾ ಸಮಾವೇಶದಲ್ಲಿ ಉದ್ಘಾಟನೆ ಮಾಡುತ್ತಿರುವುದು ಕಾಂಗ್ರೆಸ್ ಸರ್ಕಾರದ ನಾಚೀಕೆಗೇಡಿನ ಸಂಗತಿ’ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಪ್ರವಾಸಿಮಂದಿರ ಶನಿವಾರ ವೀಕ್ಷಿಸಿದ ಅವರು, ‘ರಟ್ಟೀಹಳ್ಳಿ ಹಾಗೂ ಹಿರೇಕೆರೂರ ಪ್ರವಾಸಿ ಮಂದಿರಕ್ಕೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ತಲಾ ₹5 ಕೋಟಿ ಹಾಗೂ ವಸತಿ ನಿಲಯ ನಿರ್ಮಾಣಕ್ಕೆ ₹10 ಕೋಟಿ ಅನುದಾನ ಮಂಜೂರು ಮಾಡಿದೆ. ಕಳೆದ ಎರಡುವರೆ ವರ್ಷಗಳಲ್ಲಿ ಕಟ್ಟಡವನ್ನು ಪೂರ್ಣಗೊಳಿಸದ ಕಾಂಗ್ರೆಸ್ ಸರ್ಕಾರ ತರಾತುರಿಯಲ್ಲಿ ಉದ್ಘಾಟನೆ ಮಾಡಿಸುತ್ತಿದ್ದಾರೆ’ ಎಂದು ಆರೋಪಿಸಿದರು.

₹20 ಕೋಟಿ ವೆಚ್ಚದಲ್ಲಿ ಸಾಧನಾ ಸಮಾವೇಶ ಮಾಡುತ್ತಿದ್ದಾರೆ. ಸಮಾವೇಶಕ್ಕೆ ಖಾಸಗಿ ಶಾಲಾ ಬಸ್ ಬಳಕೆ ಮಾಡಿರುವುದು ಖಂಡನೀಯ. ನೀರಾವರಿ ಯೋಜನೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪೂರ್ಣಗೊಂಡಿಲ್ಲ. ಯಾರೋ ಮಾಡಿದ ಕೆಲಸಗಳನ್ನು ಕಾಂಗ್ರೆಸ್ ಶಾಸಕರು ತರಾತುರಿಯಲ್ಲಿ ಉದ್ಘಾಟಿಸುತ್ತಿದ್ದಾರೆ’ ಎಂದು ಆರೋಪಿಸಿದರು.

ಈ ವೇಳೆ ಕಾಂಗ್ರೆಸ್ ಸರ್ಕಾರ, ಶಾಸಕರು ಹಾಗೂ ಜಿಲ್ಲಾಧಿಕಾರಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು. ಸೃಷ್ಟಿ ಪಾಟೀಲ, ಬಿಜೆಪಿ ಮಂಡಲ ಅಧ್ಯಕ್ಷ ದೇವರಾಜ ನಾಗಣ್ಣನವರ, ಪ್ರಧಾನ ಕಾರ್ಯದರ್ಶಿ ಸುಶೀಲ ನಾಡಗೇರ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುರೇಶ ದ್ಯಾವಕ್ಕಳವರ, ಪಟ್ಟಣ ಪಂಚಾಯಿತಿ ಸದಸ್ಯರಾದ ರವಿ ಹದಡೇರ, ಬಸವರಾಜ ಕಟ್ಟೇಕಾರ, ಬಸವರಾಜ ಆಡಿನವರ, ಮಂಜುಳಾ ಅಗಡಿ, ಶ್ರೀದೇವಿ ಭೈರಪ್ಪನವರ, ಲಕ್ಷ್ಮೀ ಚಿಕ್ಕಮೊರಬ, ಮುಖಂಡರಾದ ರವಿ ಮುದ್ದಣ್ಣನವರ, ಪ್ರಕಾಶ ಕೊರವರ, ಶ್ರೀನಿವಾಸ ಭೈರಪ್ಪನವರ, ಪ್ರಶಾಂತ ದ್ಯಾವಕ್ಕಳವರ, ಸಿದ್ದು ಪಾಟೀಲ, ಸುನೀಲ ಕಟ್ಟೀಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.