ರಟ್ಟೀಹಳ್ಳಿ: ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪಟ್ಟಣ ಪಂಚಾಯ್ತಿ ವಾಣಿಜ್ಯ ಸಂಕೀರ್ಣ ಉದ್ಘಾಟನೆಯಾಗುತ್ತಿರುವುದು ಸಂತಸದ ಸಂಗತಿ. ಶಾಸಕ ಯು.ಬಿ. ಬಣಕಾರ ಆಸಕ್ತಿವಹಸಿ ಪೂರ್ಣಗೊಳಿಸಿದ್ದಾರೆ. ಇದರಿಂದ ಹೆಚ್ಚಿನ ಆದಾಯ ಬಂದು ಪಟ್ಟಣ ಪಂಚಾಯ್ತಿಗೆ ಪಟ್ಟಣದ ಅಭಿವೃದ್ಧಿ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ರಟ್ಟೀಹಳ್ಳಿ ಪಟ್ಟಣದಲ್ಲಿ ಭಾನುವಾರ ಪಟ್ಟಣ ಪಂಚಾಯಿತಿಯಿಂದ ನಿರ್ಮಿಸಲ್ಪಟ್ಟ 10 ವಾಣಿಜ್ಯ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

‘ವಾಣಿಜ್ಯ ಸಂಕೀರ್ಣಗಳ ಅಭಿವೃದ್ಧಿಗೆ ಎಂ.ಪಿ.ಫಂಡ್ ನಿಂದ ₹ 10 ಲಕ್ಷ ಅನುದಾನ ನೀಡುತ್ತೇನೆ. ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ’ ಎಂದರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಯು.ಬಿ.ಬಣಕಾರ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ರಟ್ಟೀಹಳ್ಳಿ ಪಟ್ಟಣ ಪಂಚಾಯ್ತಿಗೆ ₹1.39 ಕೋಟಿ ನೀಡಿ 8 ಕಾಮಗಾರಿಗೆ ಅವಕಾಶ ಕಲ್ಪಿಸಲಾಗಿತ್ತು. ಆ ಅನುದಾನದಲ್ಲಿ ವಾಣಿಜ್ಯ ಸಂಕೀರ್ಣ ಕಾಮಗಾರಿಗೆ ₹ 25 ಲಕ್ಷ ನೀಡಿ, ಸುಸಜ್ಜಿತ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಆದ್ಯತೆ ನೀಡಲಾಯಿತು ಎಂದರು.

ಪಟ್ಟಣ ಪಂಚಾಯ್ತಿ ಅಧ್ಯಕ್ಷ ರವೀಂದ್ರ ಮುದಿಯಪ್ಪನವರ, ಮಾತನಾಡಿದರು.

ಉಪಾಧ್ಯಕ್ಷ ಶಿವಕುಮಾರ ಉಪ್ಪಾರ, ಸದಸ್ಯರಾದ ವೀರನಗೌಡ ಪ್ಯಾಟೀಗೌಡ್ರ, ರವಿ ಹದಡೇರ, ಮಲ್ಲಮ್ಮ ಕಟ್ಟೀಕಾರ, ಬಸವರಾಜ ಆಡಿನವರ, ಆರ್ಷದಬಾನು ಗೋಡಿಹಾಳ, ಪಿ.ಡಿ. ಬಸನಗೌಡ್ರ, ಲಕ್ಷ್ಮೀ ಚಿಕ್ಕಮೊರಬ, ಸರ್ಫರಾಜ ಮಾಸೂರು, ಮಖಬೂಲ್ ಮುಲ್ಲಾ, ಮಂಜುಳಾ ಅಗಡಿ, ಶ್ರೀದೇವಿ ಭೈರಪ್ಪನವರ, ಬಸವರಾಜ ಕಟ್ಟೀಮನಿ, ಲಲಿತಾ ಚನ್ನಗೌಡ್ರ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಸಂತೋಷ ಚಂದ್ರಿಕೇರ ಸೇರಿದಂತೆ ಪಟ್ಟಣ ಜನತೆ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-22-194374496

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.