ರಟ್ಟೀಹಳ್ಳಿ: ‘ಕಾಂಗ್ರೆಸ್ ಸರ್ಕಾರ ‘ಗ್ಯಾರಂಟಿ ಯೋಜನೆ’ ಜಾರಿಗೊಳಿಸಿದ್ದು, ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ನನ್ನ ಮೊದಲ ಆದ್ಯತೆ. ತಾಲ್ಲೂಕಿನ ಅಭಿವೃದ್ಧಿಗಾಗಿ ತಮ್ಮೆಲ್ಲರ ಹಿತಕ್ಕಾಗಿ ನಾನು ಪಕ್ಷ ಬದಲಿಸಬೇಕಾಯಿತು. ತಮ್ಮೆಲ್ಲರ ಸೇವೆಗೆ ಸದಾ ನಾನು ಸಿದ್ಧ’ ಎಂದು ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ತಾಲ್ಲೂಕಿನ ಚಿಕ್ಕಕಬ್ಬಾರ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾದ ನೂರಾರು ಮುಸ್ಲಿಂ ಮುಖಂಡರನ್ನು ಬಿಜೆಪಿಗೆ ಬರಮಾಡಿಕೊಂಡು ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

‘2028ಕ್ಕೆ ನೂರಕ್ಕೆ ನೂರರಷ್ಟು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ತಾಲ್ಲೂಕಿನ ಬಡವರ, ದೀನದಲಿತರ, ಅಲ್ಪಸಂಖ್ಯಾತರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತೇನೆ. ಬಿಜೆಪಿ ಮುಸ್ಲಿಂ ವಿರೋಧಿ ಪಕ್ಷ ಎಂದು ಕಾಂಗ್ರೆಸ್ನವರು ಮುಸ್ಲಿಂ ಬಾಂಧವರಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡುತ್ತಾರೆ. ಆದರೆ ದೇಶದ ಪ್ರಧಾನಿ ನರೇಂದ್ರ ಮೋದಿ ಬಂದ ಬಳಿಕ ಮುಸ್ಲಿಮರಿಗೆ ಯಾವುದೇ ತೊಂದರೆಯಾಗಿಲ್ಲ. ಜೊತೆಗೆ ದೇಶದ ಎಲ್ಲರ ಏಳಿಗ್ಗೆಗೆ ಶ್ರಮಿಸುತ್ತಿದ್ದಾರೆ ಎಂದರು.

ನಮ್ಮ ಸರ್ಕಾರದ ಅಧಿಕಾರಾವಧಿಯಲ್ಲಿ ₹1300 ಕೋಟಿ ಅನುದಾನ ತಂದು ತಾಲ್ಲೂಕಿನಲ್ಲಿ ಅಭಿವೃದ್ಧಿ ಮಾಡಿದ್ದೇನೆ. ನಾನು ಕೊನೆಯವರೆಗೂ ಹಿರೇಕೆರೂರ- ರಟ್ಟೀಹಳ್ಳಿ ತಾಲ್ಲೂಕಿನ ಜನರ ಸೇವೆ ಮಾಡುವುದಕ್ಕೆ ಸಿದ್ಧನಾಗಿದ್ದೇನೆ ಎಂದು ತಿಳಿಸಿದರು.

ಮುಸ್ಲಿಂ ಮುಖಂಡರಾದ ಜೀಲಾನಿ ಬಳಿಗಾರ, ಮಹ್ಮದಗೌಸ್ ಮಲ್ಲಿಕ್ ರಿಯಾನ್ ಮಾತನಾಡಿದರು.

ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಜೀಲಾನಿ ಬಳಿಗಾರ, ತಾಲ್ಲೂಕಾ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಮಹ್ಮದಗೌಸ್ ಚಿಕ್ಕೇರಿ. ಅಲ್ಪಸಂಖ್ಯಾತರ ಅಧ್ಯಕ್ಷ ಮಲ್ಲಿಕ್ ರಿಯಾನ್. ವಸಂತಗೌಡ ಪಾಟೀಲ, ಬಿಜೆಪಿ ಅಧ್ಯಕ್ಷ ಸಂಜೀವಯ್ಯ ಕಬ್ಬಿಣಕಂತಿಮಠ, ರವಿಶಂಕರ ಬಾಳಿಕಾಯಿ, ರೇಣುಕಪ್ಪ ಭರಮಗೌಡ್ರ, ಸೇರಿದಂತೆ ಹಲವು ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-22-857139420

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.