ರಟ್ಟೀಹಳ್ಳಿ: ಕಳೆದ ವರ್ಷ ಹೆಚ್ಚು ಮಳೆಯಿಂದಾಗಿ ರೈತ ಬೆಳೆದ ಬೆಳೆಗಳಿಗೆ ಸರಿಯಾದ ಬೆಂಬಲ ಬೆಲೆ ಸಿಗದೇ ಕಂಗಾಲಾದ ರೈತನಿಗೆ ಪ್ರಸ್ತುತ ವರ್ಷ ಬೆಳೆ ವಿಮೆ ಸಹ ಕೆಲವೇ ಕೆಲ ರೈತರಿಗೆ ಕೇವಲ 2 ಸಾವಿರ ಬಂದಿದೆ. ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಅವಳಿ ತಾಲ್ಲೂಕಿನ 23 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರಿಗೆ ಬೆಳೆ ವಿಮೆ ಹಣ ನೀಡಿಲ್ಲ. ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮೇ 6ರಂದು ಬೆಳಿಗ್ಗೆ 10 ಗಂಟೆಗೆ ಅವಳಿ ತಾಲ್ಲೂಕಿನ ಸಾವಿರಾರು ರೈತರೊಂದಿಗೆ ಹಿರೇಕೆರೂರ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ರಟ್ಟೀಹಳ್ಳಿ ಪಟ್ಟಣದಲ್ಲಿ ಶುಕ್ರವಾರ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಕಳೆದ ಬಿಜೆಪಿ ಅಧಿಕಾರವಧಿಯಲ್ಲಿ ಜಿಲ್ಲೆಗೆ ₹439 ಕೋಟಿ ಹಣ ನೀಡಲಾಗಿತ್ತು. ಆದರೆ ಕಾಂಗ್ರೇಸ್ ಸರ್ಕಾರ ರೈತರಿಗೆ ಗಾಯದ ಮೇಲೆ ಬರೆ ಎಳೆಯುವಂತ ಕಾರ್ಯ ಮಾಡುತ್ತಿರುವುದು ಖಂಡನೀಯ. ರಾಜ್ಯದ ರೈತರ ಹಿತ ಕಾಯಬೇಕಾದ ಸರ್ಕಾರ, ಶಾಸಕರು, ತಾಲ್ಲೂಕು ಆಡಳಿತ, ಕೃಷಿ ಇಲಾಖೆ ಇದ್ದು ಇಲ್ಲದಂತಾಗಿದೆ ಎಂದು ಆರೋಪಿಸಿದರು.

ರೈತರಿಗೆ ಬೆಳೆ ವಿಮೆ ಹಣ ನೀಡಬೇಕು. ಇಲ್ಲವಾದಲ್ಲಿ ಮೇ 6 ರಂದು ಹಿರೇಕೆರೂರ ತಹಶೀಲ್ದಾರ ಕಚೇರಿಗೆ ತಾಲ್ಲೂಕಿನ ಸಾವಿರಾರು ರೈತರೊಂದಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದರು.

ಮೇ 9ರಂದು ಚಿತ್ರದುರ್ಗದಲ್ಲಿ ನಡೆಯುವ ಬಿ.ಎಸ್. ಯಡಿಯೂರಪ್ಪನವರ 50 ವರ್ಷಗಳ ರಾಜಕೀಯ ಸಾರ್ಥಕ ಸೇವೆ ಹಾಗೂ ಬಿಜೆಪಿ ದಕ್ಷಿಣ ಭಾರತದಲ್ಲಿ ನೆಲೆಯೂರುವಂತೆ ಮಾಡಿದ ಅವರ ರಾಜಕೀಯ ಸೇವೆ ನಮೆಗೆಲ್ಲ ಸ್ಪೂರ್ತಿದಾಯಕ. ಅವರ ರಾಜಕೀಯ ಸೇವೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಅಭಿಮಾನೋತ್ಸವ ಜರುಗಲಿದ್ದು, ತಾಲ್ಲೂಕಿನಿಂದ 25 ಸಾವಿರಕ್ಕೂ ಹೆಚ್ಚು ಜನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಕೇಂದ್ರ ಗೃಹ ಸಚಿವ ಅಮಿತ ಶಾ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದು, ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ ಎಂದರು.

ತಾಲ್ಲೂಕು ಬಿಜೆಪಿ ಅಧ್ಯಕ್ಷ ದೇವರಾಜ ನಾಗಣ್ಣನವರ, ಪ್ರಧಾನ ಕಾರ್ಯದರ್ಶಿ ಸುಶೀಲ ನಾಡಗೇರ, ಪಟ್ಟಣ ಪಂಚಾಯಿತಿ ಅಧ್ಯಕ್ಷ ರವೀಂದ್ರ ಮುದಿಯಪ್ಪನವರ, ಉಪಾಧ್ಯಕ್ಷ ಶಿವಕುಮಾರ ಉಪ್ಪಾರ, ಸದಸ್ಯರಾದ ಬಸವರಾಜ ಆಡಿನವರ, ಮುಖಂಡರಾದ ರಾಘವೇಂದ್ರ ಹರವಿಶೆಟ್ಟರ, ಸಂದೀಪ ಪಾಟೀಲ, ಸುರೇಶ ದ್ಯಾವಕ್ಕಳವರ, ಗಿರೀಶ ಅಂಗರಗಟ್ಟಿ, ಬಸಣ್ಣ ಬಾಗೋಡಿ ಶ್ರೀನಿವಾಸ ಭೈರಪ್ಪನವರ, ವಿನಾಯಕ ಅಂಗಡಿ, ಸುರೇಶ ವಾಲ್ಮೀಕಿ ಮಂಜು ತಳವಾರ ಸುನೀಲ ಸರಶೆಟ್ಟರ, ಲೋಹಿತ್ ಮುದಿಯಪ್ಪನವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-22-213048472

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.