ರಟ್ಟೀಹಳ್ಳಿ: ಇಲ್ಲಿನ ತಹಶೀಲ್ದಾರ ಕಾರ್ಯಾಲಯದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದವರಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ತಹಶೀಲ್ದಾರ್ ಶ್ವೇತಾ ಅಮರಾವತಿ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲೇಶ ಕರಿಗಾರ ಮಾತನಾಡಿ, ‘ದ್ವಿತೀಯ ದರ್ಜೆ ಸಹಾಯಕ ಲಿಂಗರಾಜ ಮೂಲಮನಿ ಅವರು ಕರ್ತವ್ಯದಲ್ಲಿರುವಾಗ ಶಂಕರಗೌಡ ಚನ್ನಗೌಡ್ರ, ಪ್ರಕಾಶ ಹಾಗೂ ಬಸವರಾಜ ಗಬ್ಬೂರ ಎಂಬುವರು ಮಂಗಳವಾರ ಹಲ್ಲೆ ನಡೆಸಿದ್ದಾರೆ. ಸರ್ಕಾರಿ ನೌಕರರ ಮೇಲೆ ಹಲ್ಲೆ ಖಂಡನೀಯ. ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ’ ಎಂದರು.

ಸ್ಥಳಕ್ಕೆ ಆಗಮಿಸಿದ ಸಿಪಿಐ ಮೇಘರಾಜ ಎಂ.ವಿ. ಅವರು, ‘ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಸಂಘದ ಕಾರ್ಯದರ್ಶಿ ಜಿ.ಎಸ್. ಪಾಟೀಲ, ಸಂಘಟನಾ ಕಾರ್ಯದರ್ಶಿ ದೀಪಕ ಕಾಲಪಾಲ್, ನಂಜುಂಡಪ್ಪ ಕೆ.ಸಿ., ರಾಜ್ಯ ಪರಿಷತ್ ಸದಸ್ಯ ನಾಗರಾಜ ಕಟ್ಟಿಮನಿ, ಶಿವಕುಮಾರ ಬಂಗೇರ, ಕಂದಾಯ ನಿರೀಕ್ಷಕ ಶಂಕರ, ಮಾರುತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.