‘ಸೂಚನಾ ಫಲಕ ಅಳವಡಿಕೆ’ ‘ರಟ್ಟೀಹಳ್ಳಿಯ ರಾಷ್ಟ್ರೀಯ ಹೆದ್ದಾರಿ ಹಾಗೂ ಅಕ್ಕ–ಪಕ್ಕದ ಸ್ಥಳಗಳಲ್ಲಿ ಸದ್ಯದಲ್ಲಿ ಸಂಚಾರ ನಿಯಮಗಳ ಸೂಚನಾ ಫಲಕಗಳನ್ನು ಅಳವಡಿಸಲಾಗುವುದು’ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಶಿವಮೊಗ್ಗ ವಿಭಾಗದ ಸಹಾಯಕ ಎಂಜಿನಿಯರ್ ಭರತ್ ತಿಳಿಸಿದ್ದಾರೆ. ‘ಪಟ್ಟಣದ ಭಗತಸಿಂಗ್ ವೃತ್ತ ಹಾಗೂ ಹೊಸ ಬಸ್ ಸ್ಟ್ಯಾಂಡ್ ಹತ್ತಿರದ ಮಹಾಲಕ್ಷ್ಮಿ ವೃತ್ತ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗಿದೆ. ಅಲ್ಲಿ ಉಂಟಾಗುತ್ತಿರುವ ಸಮಸ್ಯೆ ಬಗ್ಗೆ ಜನರು ಮಾಹಿತಿ ನೀಡಿದ್ದಾರೆ. ಜನರ ಸುರಕ್ಷತೆ ದೃಷ್ಟಿಯಿಂದ ಸೂಚನಾ ಫಲಕಗಳನ್ನು ಅಳವಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಹೆದ್ದಾರಿ ನಿರ್ಮಾಣದ ಗುತ್ತಿಗೆದಾರರಿಗೆ ಸೂಚಿಸಲಾಗಿದೆ’ ಎಂದರು.