ರಟ್ಟೀಹಳ್ಳಿ: ವಿದ್ಯಾರ್ಥಿಗಳು ಉತ್ತಮ ಭವಿಷ್ಯಕ್ಕಾಗಿ ನಿರಂತರ ಅಧ್ಯಯನ ಶೀಲರಾಗಬೇಕು. ಆಟದೊಂದಿಗೆ ಪಾಠಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು. ಉತ್ತಮ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಹಾವೇರಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರುಚಿ ಬಿಂದಲ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ತಾಲ್ಲೂಕಿನ ಕುಡುಪಲಿ ಗ್ರಾಮದಲ್ಲಿ ಮಂಗಳವಾರ ಕುಡುಪಲಿ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು. ವಸತಿ ಶಾಲೆಯ ಅಡುಗೆ ಮನೆ, ಆಹಾರ ದಾಸ್ತಾನು ಕೊಠಡಿ, ಹಾಗೂ ಕಡತಗಳನ್ನು ಪರಿಶೀಲಿಸಿ ಸಿಬ್ಬಂದಿಗೆ ಸಲಹೆ ಸೂಚನೆ ನೀಡಿದರು.

ತಾಲ್ಲೂಕಿನ ಹುಲ್ಲತ್ತಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು.

ವಿದ್ಯಾರ್ಥಿಗಳೊಂದಿಗೆ ಮಧ್ಯಾಹ್ನದ ಭೋಜನ ಸವಿದರು. ಹುಲ್ಲತ್ತಿ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿ ಗ್ರಾಮ ಪಂಚಾಯ್ತಿ ಕಡತಗಳನ್ನು ಪರಿಶೀಲಿಸಿ, ಸರ್ಕಾರದ ಯೋಜನೆಗಳ ನಿಗದಿತ ಗುರಿ ಸಾಧಿಸುವಂತೆ ಸಿಬ್ಬಂದಿ ಸೂಚಿಸಿದರು. ಈ ವೇಳೆ ಗ್ರಾಮ ಪಂಚಾಯ್ತಿ ಅಧ್ಯಕ್ಷ, ಗ್ರಾಮ ಪಂಚಾಯ್ತಿ ಸಿಬ್ಬಂದಿ, ಶಿಕ್ಷಕರು, ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.