ರಟ್ಟೀಹಳ್ಳಿ: ತಾಲ್ಲೂಕಿನ ಕಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಣ್ಣಗುಬ್ಬಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಗ್ರಾಮಸ್ಥರು ಸ್ಥಳೀಯ ಆಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಸಮಸ್ಯೆ ಬಗೆಹರಿಸದೇ ಹೋದಲ್ಲಿ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಕುಡಿ ಯುವ ನೀರಿಗಾಗಿ ಗ್ರಾಮಸ್ಥರು ನಿತ್ಯ ಪರದಾಡುತ್ತಿದ್ದು, ಗ್ರಾಮದ ಹತ್ತಿರದ ತೋಟದ ಜಮೀನುಗಳಿಂದ ನೀರನ್ನು ತರುತ್ತಿರುವುದು ಆಡಳಿತ ಕಾರ್ಯವೈಖ್ಯರಿಯ ದುಃಸ್ಥಿತಿಯನ್ನು ಬಿಂಬಿಸುತ್ತಿದೆ.ಬೇಸಿಗೆಯ ತೀವ್ರತೆಯ ನಡುವೆಯೇ ಕುಡಿಯುವ ನೀರಿನ ಅಭಾವದೊಂದಿಗೆ ಜಾನುವಾರುಗಳಿಗೆ ನೀರಿನ ಸಮಸ್ಯೆ ಉಲ್ಭಣಗೊಂಡಿದೆ.

ಇನ್ನೂ ಹೊಲಗಳಿಗೆ ನೀರು ಕೇಳಲು ಹೋದಾಗ ರೈತರೂ ತಮ್ಮ ಸಹಾಯಕತೆಯನ್ನು ವ್ಯಕ್ತಪಡಿಸುತ್ತಿದ್ದು, ಕೊಳವೆಭಾವಿಯಲ್ಲಿ ನೀರಿನ ಕೊರತೆಯಿದೆ.

ಹೀಗಾಗಿ ನಮ್ಮ ಬೆಳೆಗಳಿಗೆ ನೀರು ಪೂರೈಕೆಗೆ ಸಾಕಾಗುತ್ತಿಲ್ಲ ಎಂದು ಹೇಳುತ್ತಿದ್ದು, ಮಹಿಳೆಯರು, ಮಕ್ಕಳು ಕೊಡಗಳನ್ನು ಹಿಡಿದು ನಿತ್ಯ ಒಂದರಿಂದ ಮತ್ತೊಂದು ಹೊಲಕ್ಕೆ ಅಲೆದಾಡುತ್ತಿದ್ದಾರೆ.

ಗ್ರಾಮದಲ್ಲಿರುವ ಶುದ್ಧ ಕುಡಿ ಯುವ ನೀರಿನ ಘಟಕವೂ ನೀರಿನ ಕೊರತೆಯಿಂದಾಗಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎರಡು ಮೂರು ದಿನಗಳಿಗೊಮ್ಮೆ ಮಾತ್ರ ನಳದ ನೀರು ಬಿಡಲಾಗುತ್ತಿದ್ದು, ಗ್ರಾಮದ ಜನರಿಗೆ ಹಾಗೂ ದನಕರುಗಳಿಗೆ ನೀರು ಸಾಕಾಗುತ್ತಿಲ್ಲ ಎನ್ನುತ್ತಾರೆ ಗ್ರಾಮಸ್ಥರು.

ಗ್ರಾಮಸ್ಥರು ಹಲವಾರು ಬಾರಿ ಪಂಚಾಯಿತಿಗೆ ಹಾಗೂ ತಾಲ್ಲೂಕು ಆಡಳಿತಕ್ಕೆ ನೀರಿನ ಅಭಾವ ಕುರಿತು ಮಾಹಿತಿ ನೀಡಿದರೂ ಯಾವುದೇ ಶಾಶ್ವತ ಕ್ರಮ ಕೈಗೊಳ್ಳುತ್ತಿಲ್ಲ.ಕುಡಿಯುವ ನೀರಿನಂತಹ ಮೂಲ ಸೌಲಭ್ಯ ಒದಗಿಸುವಲ್ಲಿ ಗ್ರಾಮ ಪಂಚಾಯಿತಿ ವಿಫಲವವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸಣ್ಣಗುಬ್ಬಿ ಗ್ರಾಮಕ್ಕೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎನ್ನುವುದು ಜನರ ಮನವಿಯಾಗಿದೆ.

ಸಣ್ಣಗುಬ್ಬಿ ಗ್ರಾಮದ ಹರಿಜನ ಕಾಲೊನಿಗೆ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸದೇ ತಾಲ್ಲೂಕು ಆಡಳಿತ ನಿರ್ಲಕ್ಷ್ಯವಹಿಸಿದೆ.

ಸಮಸ್ಯೆಯ ಬಗ್ಗೆ ಅಧಿಕಾರಿಗಳ ಬಳಿ ಮನವಿ ಮಾಡಿದರೂ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕಾಲೊನಿ ನಿವಾಸಿಗಳು ಮಂಗಳವಾರ ದಿಢೀರ್ ಪ್ರತಿಭಟನೆ ಮಾಡಿ ಖಾಲಿ ಕೊಡ ಪ್ರದರ್ಶಿಸಿದರು.

‘ಕಳೆದ ಎರಡು ತಿಂಗಳುಗಳಿಂದ ನಮ್ಮ ಕಾಲೊನಿಗೆ ಸರಿಯಾದ ಕುಡಿಯುವ ನೀರಿನ ಪೂರೈಕೆಯಾಗುತ್ತಿಲ್ಲ. ಗ್ರಾಮ ಪಂಚಾಯಿತಿಯವರು ಸರಿಯಾಗಿ ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ.

ಕೂಡಲೇ ಜನರ ಕಷ್ಟಗಳಿಗೆ ಜನಪ್ರತಿನಿಧಿಗಳು ಸ್ಪಂದಿಸಬೇಕು’ ಎನ್ನುತ್ತಾರೆ ಕಾಲೋನಿ ನಿವಾಸಿ ರಾಜು ಮುಕ್ಕಣ್ಣನವರ. ನಿವಾಸಿಗಳಾದ ಶೃತಿ ಮುಕ್ಕಣ್ಣನವರ, ರಾಘು ಹರಿಜನ, ಲತಾ ಹರಿಜನ, ಸುಮಲತಾ ಮುಕ್ಕಣ್ಣನವರ ಹನುಮಂತಪ್ಪ ಹರಿಜನ, ಮಾತಂಗೆಮ್ಮ ಹರಿಜನ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ‘ಸಣ್ಣಗುಬ್ಬಿ ಗ್ರಾಮದಲ್ಲಿ ಪ್ರತಿವರ್ಷ ಬೇಸಿಗೆಯಲ್ಲಿ ಬಹಳಷ್ಟು ಕುಡಿಯುವ ನೀರಿನ ಅಭಾವ ಉಂಟಾಗುತ್ತದೆ. ಸಾಕಷ್ಟು ಬಾರಿ ಗ್ರಾಮ ಪಂಚಾಯ್ತಿಗೆ ಈ ಬಗ್ಗೆ ಮೊದಲೇ ಮಾಹಿತಿ ನೀಡಿದ್ದರೂ ಯಾವುದೇ ಸೂಕ್ತ ಮುನ್ನಚ್ಚರಿಕೆಯ ದೃಷ್ಟಿಯಿಂದ ಕ್ರಮಕೈಗೊಳ್ಳವುದಿಲ್ಲ. ಕೂಡಲೇ ಸಣ್ಣಗುಬ್ಬಿ ಗ್ರಾಮದ ಜನರಿಗೆ, ಜಾನುವಾರುಗಳಿಗೆ ನೀರಿನ ವ್ಯವಸ್ಥೆಯನ್ನು ಸ್ಥಳೀಯ ಆಡಳಿತ ವ್ಯವಸ್ಥೆ ಕಲ್ಪಿಸಬೇಕು ಇಲ್ಲವಾದಲ್ಲಿ ಗ್ರಾಮ ಪಂಚಾಯ್ತಿ ಎದುರಿಗೆ ನೂರಾರು ಮಹಿಳೆಯೊಂದಿಗೆ ಖಾಲಿ ಕೊಡ ಹಿಡಿದು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎನ್ನುತ್ತಾರೆ ಸ್ಥಳೀಯ ಮುಖಂಡ ದೇವರಾಜ ನಾಗಣ್ಣನವರ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-22-1653677745

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.