ರಟ್ಟೀಹಳ್ಳಿ: ತಾಲ್ಲೂಕಿನ ಸಣ್ಣಗುಬ್ಬಿ ಗ್ರಾಮದಲ್ಲಿ ಬೋರವೆಲ್ ಕೊರೆಯಿಸಿ ಜನರಿಗೆ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರ ಪರದಾಟ ಎನ್ನುವ ಶೀರ್ಷಿಕೆಯಡಿ ಗ್ರಾಮದಲ್ಲಿನ ನೀರಿನ ಸಮಸ್ಯೆ ಕುರಿತು ‘ಪ್ರಜಾವಾಣಿ‘ ಪತ್ರಿಕೆ ಮೇ 9 ರಂದು ವಿಸೃತ ವರದಿ ಮಾಡಿತ್ತು.

ತಕ್ಷಣ ಎಚ್ಚೆತ್ತ ತಾಲ್ಲೂಕು ಆಡಳಿತ ಕೂಡಲೇ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ಜನರ ಸಮಸ್ಯೆ ಅರಿತು ಪರಿಹಾರ ಕ್ರಮ ಕೈಗೊಂಡಿದೆ. ಹೀಗಾಗಿ ಜನರು ತಾಲ್ಲೂಕು ಆಡಳಿತ ಹಾಗೂ ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಸಣ್ಣಗುಬ್ಬಿ ಗ್ರಾಮದಲ್ಲಿನ ಜನರು ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮಸ್ಥರು ಮನವಿಯನ್ನೂ ಸಲ್ಲಿಸಿದ್ದರು. ಪತ್ರಿಕೆಯಲ್ಲೂ ವರದಿ ಪ್ರಕಟವಾಗಿತ್ತು. ಗ್ರಾಮದಲ್ಲಿ ನೂತನ ಬೋರ್ವೆಲ್ ಕೊರೆಯಿಸಿ ಜನರಿಗೆ ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಹಶೀಲ್ದಾರ್ರಾದ ಶ್ವೇತಾ ಅಮರಾವತಿ ಅವರು ತಿಳಿಸಿದರು.

ಸಣ್ಣಗುಬ್ಬಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ತಾಲ್ಲೂಕು ಆಡಳಿತ ಹಾಗೂ ಗ್ರಾಮ ಪಂಚಾಯ್ತಿಗೆ ಮನವಿ ಸಲ್ಲಿಸಲಾಗಿತ್ತು. ನಂತರ ದಿನ ಪತ್ರಿಕೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ವರದಿ ಪ್ರಕಟವಾಗಿತ್ತು.

ಸ್ಥಳಕ್ಕೆ ತಾಲ್ಲೂಕು ಪಂಚಾಯ್ತಿ ಇ.ಒ. ಎನ್. ರವಿ ಭೇಟಿ ನೀಡಿ ಸಮಸ್ಯೆ ಕುರಿತು ತಾಲ್ಲೂಕು ದಂಡಾಧಿಕಾರಿ ಶ್ವೇತಾ ಅಮರಾವತಿ ಅವರ ಗಮನಕ್ಕೆ ತಂದು, ಗ್ರಾಮದಲ್ಲಿ ಬೋರವೆಲ್ ಕೊರೆಸಿದರು. ಮೂರು ಇಂಚಿನಷ್ಟು ನೀರು ಇದ್ದು ಗ್ರಾಮಕ್ಕೆ ಬಹುಶಃ ಮುಂಬರುವ ದಿನಗಳ ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲದಂತಾಗಬಹುದು.

ತಾಲ್ಲೂಕು ದಂಡಾಧಿಕಾರಿ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ. ಮತ್ತು ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೆ ಸಣ್ಣಗುಬ್ಬಿ ಗ್ರಾಮಸ್ಥರ ಪರವಾಗಿ ಗ್ರಾಮದ ಮುಖಂಡ ದೇವರಾಜ ನಾಗಣ್ಣನವರ ಧನ್ಯವಾದ ಸಲ್ಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-22-2014704745

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.