ರಟ್ಟೀಹಳ್ಳಿ: ಪಟ್ಟಣದ ಕೋಟೆಯಲ್ಲಿರುವ ಐತಿಹಾಸಿಕ ಪ್ರಸಿದ್ಧ ಕಂದಬೇಶ್ವರ ದೇವಸ್ಥಾನದಲ್ಲಿ ಏ.21ರಿಂದ ಆರಂಭವಾದ ಶಂಕರ ಭಗವತ್ಪಾದಾಚಾರ್ಯರ ಜಯಂತ್ಯುತ್ಸವವನ್ನು ಭಾನುವಾರ ಅದ್ದೂರಿಯಾಗಿ ಆಚರಿಸಲಾಯಿತು.

ಪ್ರತಿದಿನ ಬೆಳಿಗ್ಗೆ ಕದಂಬೇಶ್ವರ ದೇವರು ಹಾಗೂ ಶಂಕರಾಚಾರ್ಯರ ಗದ್ದುಗೆಗೆ ರುದ್ರಾಭಿಷೇಕ, ಅಷ್ಟೋತ್ತರ ನಾಮಾವಳಿ, ಹರಿದ್ರಾಕ್ಷತಾರ್ಚನೆ, ಮಹಾಮಂಗಳಾರತಿ ವಸಂತೋತ್ಸವ ಹಾಗೂ ಸಂಜೆ 5.30ಕ್ಕೆ ಮಹಾಮಂಗಳಾರತಿ ಕಾರ್ಯಕ್ರಮ ಜರುಗಿದವು.

ಭಾನುವಾರ ಬೆಳಿಗ್ಗೆ 7.30ಕ್ಕೆ ಪಲ್ಲಕ್ಕಿ ಉತ್ಸವ, 11ಕ್ಕೆ ಕುಂಕುಮಾರ್ಚನೆ, ಮಹಾನೈವೇದ್ಯ, ಮಹಾಮಂಗಳಾರತಿ ನಡೆದ ಬಳಿಕ ಅನ್ನ ಪ್ರಸಾದ ವಿತರಿಸಲಾಯಿತು. ತಾಲ್ಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ಗಿರೀಶ ನಾಡಗೇರ, ಕಾರ್ಯದರ್ಶಿ ಪ್ರದೀಪ ಕುಲಕರ್ಣಿ, ಸುಶೀಲ ನಾಡಗೇರ, ದತ್ತಾತ್ರೇಯ ಜೋಶಿ, ಪ್ರಸನ್ನ ಬಿದರಳ್ಳಿ, ಗುರುರಾಜ ಕಟ್ಟಿ, ಸುಮೇಧ ಕುಲಕರ್ಣಿ, ಸುಬ್ರಹ್ಮಣ್ಯ ನಾಡಗೇರ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-22-720691990

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.