ರಟ್ಟೀಹಳ್ಳಿ: ‘ಪಟ್ಟಣ ಪಂಚಾಯಿತಿ ನೂತನ ಕಟ್ಟಡ ಕಾಮಗಾರಿ ಆರಂಭಗೊಂಡು ಎರಡು ವರ್ಷಗಳಾದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಕಳೆದ 10 ತಿಂಗಳುಗಳಿಂದ ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತಿದೆ. ಕೂಡಲೇ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ರವೀಂದ್ರ ಮುದಿಯಪ್ಪನವರ ಆಗ್ರಹಿಸಿದರು.

ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2024ರಲ್ಲಿ ಅಂದಾಜು ₹2 ಕೋಟಿ ವೆಚ್ಚದಲ್ಲಿ ಆರಂಭಗೊಂಡಿರುವ ನೂತನ ಪಟ್ಟಣ ಪಂಚಾಯಿತಿ ಕಟ್ಟಡ ಕಾಮಗಾರಿ ಆಮೆಗತಿಯಲ್ಲಿ ಸಾಗಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.

ಬಹುಗ್ರಾಮ ಕುಡಿಯುವ ನೀರು ಯೋಜನೆ ಅಂಗವಾಗಿ ಪಟ್ಟಣದ ಎಲ್ಲ ರಸ್ತೆಗಳನ್ನು ಹಾಳು ಮಾಡಿದ್ದಾರೆ. ಸರಿಯಾಗಿ ಗುಂಡಿಗಳನ್ನು ಮುಚ್ಚಿಲ್ಲ. ಕೆಲವೊಂದು ಭಾಗಗಳಲ್ಲಿ ಪೈಪಲೈನ್ ಕೂಡ ಅಳವಡಿಸಿಲ್ಲ. ಇದುವರೆಗೂ ಓವರ್ ಹೆಡ್ ಟ್ಯಾಂಕ್ ಕೂಡ ನಿರ್ಮಿಸಿಲ್ಲ. ಗುತ್ತಿಗೆದಾರರು ಕಾಮಗಾರಿ ವಿಳಂಬ ಮಾಡುತ್ತಿದ್ದು, ಸಂಬಂಧಿಸಿದ ಅಧಿಕಾರಿ ಕಾರ್ಯಪ್ರವೃತ್ತರಾಗಬೇಕು ಎಂದು ಆಗ್ರಹಿಸಿದರು.

ಪಟ್ಟಣದ ಹೆದ್ದಾರಿ ರಸ್ತೆ ಮಾರ್ಗದಲ್ಲಿ ವಿದ್ಯುತ್ ದೀಪ ಅಳವಡಿಕೆ ಸರಿಯಿಲ್ಲ. ರಸ್ತೆ ನಿರ್ಮಿಸುವಾಗ ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸಿಲ್ಲ. ಈ ಕುರಿತು ಇಲಾಖೆ ಅಧಿಕಾರಿಗಳು ಕ್ರಮವಹಿಸಿಬೇಕು ಎಂದರು.

ಈ ವೇಳೆ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ಆಡಿನವರ, ಸದಸ್ಯ ರವಿ ಹದಡೇರ ಹಾಗೂ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-22-1502988668

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.