ಹಾವೇರಿ: ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದ ಯುವತಿಯನ್ನು ಕಾರಿನಲ್ಲಿ ಬಂದು ಹಾವೇರಿಯಲ್ಲಿ ಅಪಹರಣ ಮಾಡಿಕೊಂಡು ಹೋಗಿ ಮೊಟೆಬೆನ್ನೂರ ಬಳಿ ಬಿಟ್ಟು ಹೋದ ಘಟನೆ ಭಾನುವಾರ ನಡೆದಿದೆ.

ನಗರದ ವಿಷ್ಣು (25) ಹಾಗೂ ಈತನ ಇಬ್ಬರು ಸ್ನೇಹಿತರು ಅಪರಹರಣ ಮಾಡಿದ ಆರೋಪಿಗಳು.

ವಿಷ್ಣು ಯುವತಿಯನ್ನು ಮದುವೆ ಮಾಡಿಕೊಳ್ಳುವಂತೆ ಕಳೆದ ಹಲವು ದಿನಗಳಿಂದ ಪೀಡಿಸುತ್ತಿದ್ದ. ಇದಕ್ಕೆ ಯುವತಿ ವಿರೋಧ ವ್ಯಕ್ತಪಡಿಸಿದ್ದಳು. ಇದರಿಂದಾಗಿ ಕೋಪಕೊಂಡ ವಿಷ್ಣು ಭಾನುವಾರ ಬೆಳಿಗ್ಗೆ ಯುವತಿ ತನ್ನ ಸ್ನೇಹಿತೆಯರೊಂದಿಗೆ ತೆರಳುತ್ತಿದ್ದ ಸಮಯದಲ್ಲಿ ಕಾರಿನಲ್ಲಿ ಬಂದು ಅಪಹರಣ ಮಾಡಿದ್ದಾರೆ.

ಘಟನೆಯನ್ನು ಯುವತಿಯ ಸ್ನೇಹಿತೆಯರು ಮೊಬೈಲ್ನಲ್ಲಿ ಸೆರೆ ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೊಲೀಸರು ಆರೋಪಿಗಳ ಬೆನ್ನು ಹತ್ತಿದ್ದಾರೆ. ಆರೋಪಿ ವಿಷ್ಣು ಬ್ಯಾಡಗಿ ತಾಲ್ಲೂಕಿನ ಮೊಟೆಬೆನ್ನೂರ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಬಿಟ್ಟು, ಕಾರನ್ನು ತನ್ನ ಮನೆ ಬಳಿ ಬಿಟ್ಟು ನಾಪತ್ತೆಯಾಗಿದ್ದಾನೆ.

ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.