ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಡಗಿ | ಪ್ರಧಾನಿ ಮೋದಿ ಭಾವಚಿತ್ರ ತೆರವು: ಬಿಜೆಪಿ ಕಾರ್ಯಕರ್ತರ ಆಕ್ರೋಶ

Published 6 ಫೆಬ್ರುವರಿ 2024, 15:19 IST
Last Updated 6 ಫೆಬ್ರುವರಿ 2024, 15:19 IST
ಅಕ್ಷರ ಗಾತ್ರ

ಬ್ಯಾಡಗಿ: ಪಟ್ಟಣದ ಪಶು ಆಸ್ಪತ್ರೆಯ ಸಂಚಾರಿ ತುರ್ತು ಚಿಕಿತ್ಸಾ ವಾಹನದ ಮೇಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ತೆಗೆದು ಹಾಕಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ ಅವರ ಭಾವಚಿತ್ರ ಹಾಕಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಸಿದ್ಧರಾಮಯ್ಯ ಅವರ ಭಾವಚಿತ್ರಕ್ಕೆ ಸಗಣಿ ಎರಚಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ಅವರ ಭಾವಚಿತ್ರ ತೆರವುಗೊಳಿಸಿದಂತೆ ಸಿದ್ಧರಾಮಯ್ಯ ಅವರ ಭಾವಚಿತ್ರ ತೆರವಿಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ  ಕೆಲ ಹೊತ್ತು ಪ್ರತಿಭಟನೆ ನಡೆಸಿದರು.

ಬಸವರಾಜ ಸಂಕಣ್ಣನವರ ಮಾತನಾಡಿ, ಸಂಚಾರಿ ಚಿಕಿತ್ಸಾ ಘಟಕಕ್ಕೆ ಕೇಂದ್ರ ಸರ್ಕಾರ ಅನುದಾನ ನೀಡಿದರೂ ಪ್ರಧಾನಿ ಮೋದಿ ಅವರ ಭಾವಚಿತ್ರವನ್ನು ಉದ್ದೇಶ ಪೂರ್ವಕವಾಗಿ ತೆಗೆದು ಹಾಕಿ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದರು.

ಪುರಸಭೆ ಮಾಜಿ ಅಧ್ಯಕ್ಷ ಮುರಿಗೆಪ್ಪ ಶೆಟ್ಟರ್, ಶಂಭಣ್ಣ ಬಿದರಿ, ಶಿವಣ್ಣ ಬೆನಕನಕೊಂಡ, ಹರೀಶ ಕಲಕಟ್ಟಿ, ನಾಗಪ್ಪ ಮೊಟೇಬೆನ್ನೂರ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT