ಮಂಗಳವಾರ, ಅಕ್ಟೋಬರ್ 20, 2020
27 °C

ಬಾಕಿ ವೇತನ ಪಾವತಿಗಾಗಿ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಗ್ರಾಮ ಪಂಚಾಯಿತಿ ನೌಕರರಿಗೆ ನಾಲ್ಕು ವರ್ಷಗಳಲ್ಲಿ ಬಾಕಿ ಉಳಿದಿರುವ ಸಂಬಳವನ್ನು ಕೂಡಲೇ ಬಿಡುಗಡೆ ಮಾಡಲು ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಸಮಿತಿ ವತಿಯಿಂದ ದೇವಗಿರಿಯ ಜಿಲ್ಲಾಡಳಿತ ಭವನದ ಮುಂಭಾಗ ಸೋಮವಾರ ಪ್ರತಿಭಟನೆ ನಡೆಯಿತು. 

ಕೋವಿಡ್‌ ಸಂದರ್ಭದಲ್ಲಿ ಗ್ರಾ.ಪಂ. ನೌಕರರು ಹಗಲಿರುಳು ದುಡಿದಿದ್ದಾರೆ. ಕುಡಿಯುವ ನೀರು ಪೂರೈಕೆ, ಸ್ವಚ್ಛತೆ, ಸೀಲ್‍ಡೌನ್‌‌ ಮುಂತಾದ ಕೆಲಸಗಳಲ್ಲಿ ಹಾಗೂ ಕ್ವಾರೆಂಟೈನ್ ಕ್ಯಾಂಪ್‌ಗಳಲ್ಲಿ ಶ್ರಮಿಸಿದ್ದಾರೆ. ಬಾಕಿ ಉಳಿದ ಸಂಬಳ ಕೊಡಿಸಲು ಸರ್ಕಾರ ತೆರಿಗೆ ಸಂಗ್ರಹದಲ್ಲಿ 14, 15ನೇ ಹಣಕಾಸಿನ ಯೋಜನೆಯಲ್ಲಿ ಸಂಬಳ ಕೊಡಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನ ಜಾರಿ ಮಾಡದೇ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಕಾರ್ಮಿಕ ಇಲಾಖೆ ನಿಗದಿಪಡಿಸಿದ ಕನಿಷ್ಟ ವೇತನ ಜಾರಿಗೊಳಿಸಬೇಕು, ನಿವೃತ್ತಿಯಾದವರಿಗೆ 15 ತಿಂಗಳು ಗ್ರಾಚ್ಯುಟಿ ಕೊಡಬೇಕು. ಇಎಫ್‌ಎಂಎಸ್‌ಗೆ ಬಾಕಿ ಉಳಿದ ಕಸಗುಡಿಸುವ ಮತ್ತು ಪಂಪ್ ಆಪರೇಟರ್ ಹಾಗೂ ಇತರೆ ಸಿಬ್ಬಂದಿಯನ್ನು ಸೇರ್ಪಡೆ ಮಾಡಬೇಕು, ಸೇವಾ ಪುಸ್ತಕ ತೆರೆಯಬೇಕು. ಪಂಪ್‌ ಆಪರೇಟರ್‌ಗಳಿಂದ ಕರ ವಸೂಲಿಗಾರರ ಹುದ್ದೆಗೆ ಬಡ್ತಿ ನೀಡಬೇಕು, ಅನುಕಂಪದ ನೇಮಕಾತಿ ಮಾಡಲು ನಿರ್ದೇಶನ ನೀಡಬೇಕು, ಸರ್ಕಾರಿ ಆದೇಶಗಳನ್ನು ಜಾರಿ ಮಾಡಿದ ಪಿ.ಡಿ.ಒ.ಗಳ ಮೇಲೆ ಸೂಕ್ತ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು. 

ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ ಕೋಟಿ, ರಾಜ್ಯ ಉಪಾಧ್ಯಕ್ಷ ಬಿ.ಐ.ಈಳಗೇರ, ಅಧ್ಯಕ್ಷ ಅಂದಾನಪ್ಪ ಹೆಬಸೂರ, ಸಿಐಟಿಯು ಜಿಲ್ಲಾ ಸಂಚಾಲಕ ವಿನಾಯಕ ಕುರುಬರ ಹಾಗೂ ಗ್ರಾಮ ಪಂಚಾಯಿತಿ ನೌಕರರು ಪಾಲ್ಗೊಂಡಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು