ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಕಿ ವೇತನ ಬಿಡುಗಡೆಗೆ ಆಗ್ರಹ

Last Updated 24 ಸೆಪ್ಟೆಂಬರ್ 2021, 16:59 IST
ಅಕ್ಷರ ಗಾತ್ರ

ಹಾವೇರಿ: ‘ಜೂನ್, ಜುಲೈ, ಆಗಸ್ಟ್ ತಿಂಗಳ ಬಾಕಿ ವೇತನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು.ಬಿಸಿಯೂಟ ತಯಾರಕರಿಗೆ ಮಾಸಿಕ ಕನಿಷ್ಠ ವೇತನ ₹21,000, ಇ.ಎಸ್.ಐ. ಮತ್ತು ಪಿ.ಎಫ್. ಯೋಜನೆ ಜಾರಿಗೊಳಿಸಬೇಕು’ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಫೆಡರೇಷನ್‌ನ ಜಿಲ್ಲಾ ಸಮಿತಿ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಕಾಯಂಗೊಳಿಸಬೇಕು,ಪಿಂಚಣಿ, ಭವಿಷ್ಯ ನಿಧಿ, ಇ.ಎಸ್.ಐ ಇತ್ಯಾದಿ ಯೋಜನೆಗಳನ್ನು ಜಾರಿಗೊಳಿಸಬೇಕು. ಅಂಗನವಾಡಿ ಫಲಾನುಭವಿಗಳಿಗೆ ಮೊಟ್ಟೆ ವಿತರಿಸುತ್ತಿದ್ದು, ಕೇವಲ ₹5 ಕೊಡಲಾಗುತ್ತಿದೆ. ಮಾರುಕಟ್ಟೆಯಲ್ಲಿ₹7ರವರೆಗೂ ದರ ಹೆಚ್ಚಳವಾಗಿದೆ. ಈ ಕುರಿತು ಹಲವಾರು ಬಾರಿ ಸಚಿವರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

2015ರಿಂದೀಚೆಗೆ ನಿವೃತ್ತರಾದ 2250 ಕಾರ್ಯಕರ್ತೆಯರಿಗೆ ಹಾಗೂ 5044 ಸಹಾಯಕಿಯರಿಗೆ ಭರವಸೆ ಕೊಟ್ಟಂತೆ ಇಡಿಗಂಟು ಹಣವನ್ನು ಇದುವರೆಗೂ ಬಿಡುಗಡೆ ಮಾಡಿರುವುದಿಲ್ಲ. ಆದ್ದರಿಂದ ತುರ್ತಾಗಿ ಬಿಡುಗಡೆ ಮಾಡಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಎಲ್.ಕೆ.ಜಿ/ ಯುಕೆಜಿ (ಪ್ರಾಥಮಿಕ ಶಿಕ್ಷಣ) ತರಗತಿಗಳನ್ನು ಆರಂಭಿಸಬೇಕು. ನಿವೃತ್ತ ನ್ಯಾಯಮೂರ್ತಿ ಎನ್.ಕೆ. ಪಾಟೀಲ್ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಘಟಕದ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ, ಜಿಲ್ಲಾ ಘಟಕದ ಅಧ್ಯಕ್ಷ ಜಿ.ಡಿ.ಪೂಜಾರ, ಲಲಿತಾ ಬುಶೆಟ್ಟಿ, ಅಶೋಕ ಕಾಳೆ, ಸರೋಜಮ್ಮ ಹಿರೇಮಠ, ನಿರ್ಮಲಾ ಬಂಕಾಪುರ, ನಿರ್ಮಲಾ ಪಾಟೀಲ, ಮಂಜುಳಾ ಕಳಸೂರ, ರೇಖಮ್ಮ ಧನ್ಮೂರ, ನಾಗರತ್ನಾ ಕುಲಕರ್ಣಿ, ರಾಜೇಶ್ವರಿ ದೊಡ್ಡಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT