ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಆಗ್ರಹ

Last Updated 8 ಡಿಸೆಂಬರ್ 2021, 11:32 IST
ಅಕ್ಷರ ಗಾತ್ರ

ಹಾವೇರಿ: ಇಲ್ಲಿಯ ಪ್ರಮುಖ ಬೆಳೆಯಾದ ಮೆಕ್ಕೆಜೋಳವನ್ನು ಅತಿ ಹೆಚ್ಚು ರೈತರು ಬೆಳೆಯುತ್ತಾರೆ. ಹೀಗಾಗಿತಾಲ್ಲೂಕು ಮೆಕ್ಕೆಜೋಳ ಕಣಜ ಎನಿಸಿದೆ. ಕೂಡಲೇ ತಾಲ್ಲೂಕಿನಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು ಎಂದು ಜೆಡಿಎಸ್‌ ತಾಲ್ಲೂಕು ಘಟಕದ ಮುಖಂಡರು ಒತ್ತಾಯಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೆಕ್ಕೆಜೋಳವನ್ನು ₹1860ರ ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿ ಮಾಡಬೇಕೆಂದು ಹೇಳುತ್ತವೆ. ಅಕಾಲಿಕ ಮಳೆಯಿಂದಾಗಿ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಕ್ವಿಂಟಲ್‌ಗೆ ಸಾವಿರದಿಮದ 1,500ರವರೆಗೆ ಖರೀದಿ ಆಗುತ್ತಿದೆ. ಇದರಿಂದ ರೈತರಿಗೆ ಪ್ರತಿ ಕ್ವಿಂಟಲ್‌ಗೆ ₹800ವರೆಗೆ ನಷ್ಟವಾಗುತ್ತಿದೆ. ರೈತರಿಗೆ ಸಿಗಬೇಕಾದ ಲಾಭ ದಲ್ಲಾಳಿಗಳಿಗೆ ಸಿಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಬಿತ್ತನೆ ಬೀಜ, ರಸಗೊಬ್ಬರ, ಬೆಳೆಗೆ ಸಿಂಪಡಿಸುವ ಔಷಧ, ಡೀಸೆಲ್‌ ದರ ಹೆಚ್ಚಳ, ಕೂಲಿ ಕಾರ್ಮಿಕರ ಕೂಲಿ ಹೆಚ್ಚಳ ಈ ಎಲ್ಲ ಕಾರಣಗಳಿಂದ ರೈತರು ನಷ್ಟ ಅನುಭವಿಸುವಂತಾಗಿದೆ. ಅಕಾಲಿಕ ಮಳೆ, ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಬೆಳೆದ ಮೆಕ್ಕೆಜೋಳವನ್ನು ಸಂರಕ್ಷಣೆ ಮಾಡಿಕೊಳ್ಳಲು ಆಗದೇ ರೈತರು ಕಂಗೆಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರವು 8 ದಿನದೊಳಗಾಗಿ ಖರೀದಿ ಕೇಂದ್ರವನ್ನು ಆರಂಭಿಸಬೇಕು ಇಲ್ಲದೇ ಹೋದರೆ ರೈತರೊಂದಿಗೆ ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಹಾವೇರಿ ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.ಜೆಡಿಎಸ್‌ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಂ. ಸುಂಕದ, ಮಲ್ಲಿಕಾರ್ಜುನ ಅರಳಿ, ಸಿದ್ದಬಸಪ್ಪ ಯಾದವ, ಮಹಾಂತೇಶ ಬೇವಿನಹಿಂಡಿ, ರಾಜೇಸಾಬ್‌ ತರ್ಲಘಟ್ಟ, ರವಿ ಗಂಗಮ್ಮನವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT