ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಮೀಸಲಾತಿ ಹೆಚ್ಚಳ, ಬಿಜೆಪಿ ಸಂಭ್ರಮಾಚರಣೆ

Last Updated 8 ಅಕ್ಟೋಬರ್ 2022, 15:00 IST
ಅಕ್ಷರ ಗಾತ್ರ

ಹಾವೇರಿ: ಸರ್ಕಾರ ಎಸ್.ಸಿ, ಮತ್ತು ಎಸ್.ಟಿ ಮಿಸಲಾತಿ ಹೆಚ್ಚಳ ಮಾಡಿದ್ದಕ್ಕೆ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಬಿಜೆಪಿಯ ಜಿಲ್ಲಾ ಎಸ್.ಟಿ. ಮೋರ್ಚಾ ವತಿಯಿಂದ ಸಿಹಿ ಹಂಚಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು.

ಶಾಸಕ ನೆಹರು ಓಲೇಕಾರ ಮಾತನಾಡಿ, ‘ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ಹೋರಾಟ 30 ವರ್ಷಗಳಿಂದ ನಡೆಯುತ್ತಾ ಬಂದಿದ್ದು. ನಮ್ಮ ಬಿಜೆಪಿ ಸರ್ಕಾರ ಪರಿಶಿಷ್ಟ ಜನಾಂಗದವರಿಗೆ ಮೀಸಲಾತಿ ಹೆಚ್ಚಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದಿಟ್ಟ ನಿರ್ಧಾರ ಕೈಗೊಂಡು ಜನಾಂಗಕ್ಕೆ ನೆಮ್ಮದಿ ತಂದಿದ್ದಾರೆ ಎಂದು ಹೇಳಿದರು.

ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಮಾತನಾಡಿ, ‘ಈ ಎರಡು ಸಮುದಾಯದವರು ಹೋರಾಟ ಮಾಡಿದ್ದರು. ಪ್ರಸನ್ನಾನಂದ ಪುರಿ ಸ್ವಾಮೀಜಿ 242 ದಿನ ಸತ್ಯಾಗ್ರಹದಲ್ಲಿ ಕುಳಿತಿರುವುದು ಒಂದು ದೊಡ್ಡ ಪವಾಡ ಎಂದು ಬಣ್ಣಸಿದರು. ಈ ಸಮಾಜದವರು ಶೈಕ್ಷಣಿಕವಾಗಿ ಬೆಳೆದು ಸರ್ಕಾರದ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಲು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ಎಸ್.ಸಿ, ಎಸ್.ಟಿ ಸಮುದಾಯವರು ಜನಸಂಖ್ಯೆಗಳ ಅನುಗಣವಾಗಿ ಮೀಸಲಾತಿ ಹೆಚ್ಚಿಸಿದ ಕ್ರಮ, ಆ ಸಮಾಜಗಳ ಮೇಲೆ ಮುಖ್ಯಮಂತ್ರಿಯವರ ಕಾಳಜಿ ತೋರಿಸುತ್ತದೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಕೆ.ಸಿ. ಕೋರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ ಹೊಸಳ್ಳಿ, ಕೃಷ್ಣಾ ಈಳಗೇರ, ರುದ್ರೇಶ ಚಿನ್ನಣ್ಣನವರ, ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷರಾದ ಶಿವಾನಂದ ಯಮನಕ್ಕನವರ, ಗ್ರಾಮೀಣ ಮಂಡಲ ಅಧ್ಯಕ್ಷರಾದ ಬಸವರಾಜ ಕಳಸೂರು ಜಿಲ್ಲಾ ಕಾರ್ಯದರ್ಶಿ ಲತಾ ಬಡ್ನಿಮಠ ಮತ್ತು ಪಕ್ಷದ ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT