ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಣೆಬೆನ್ನೂರು: ಗ್ರಾಮ ಪಂಚಾಯಿತಿಗೂ ಕಾಲಿಟ್ಟ ರೆಸಾರ್ಟ್‌ ರಾಜಕಾರಣ

40 ದಿನ ಬೆಂಗಳೂರಿನ ರೆಸಾರ್ಟ್‌ನಲ್ಲಿದ್ದ ಸದಸ್ಯರು: ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ
Last Updated 6 ಡಿಸೆಂಬರ್ 2022, 15:20 IST
ಅಕ್ಷರ ಗಾತ್ರ

ರಾಣೆಬೆನ್ನೂರು: ಬೆಂಗಳೂರಿನ ರೆಸಾರ್ಟ್‌ವೊಂದರಲ್ಲಿ 40 ದಿನ ತಂಗಿದ್ದ ತಾಲ್ಲೂಕಿನ ದೇವರಗುಡ್ಡ ಗ್ರಾಮ ಪಂಚಾಯಿತಿಯ 9 ಸದಸ್ಯರು ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದು, ಗ್ರಾ.ಪಂ. ಕಾರ್ಯಾಲಯದಲ್ಲಿ ಮಂಗಳವಾರ ಅವಿಶ್ವಾಸ ನಿರ್ಣಯ ಮಂಡನೆ ಮಾಡುವಲ್ಲಿ ಯಶಸ್ವಿಯಾದರು.

ದೇವರಗುಡ್ಡ ಗ್ರಾಮ ಪಂಚಾಯಿತಿಯು 13 ಸದಸ್ಯರ ಬಲಾಬಲ ಹೊಂದಿದ್ದು, ಅಧಿಕಾರಕ್ಕಾಗಿ ಎರಡು ಗುಂಪುಗಳ ನಡುವೆ ಕಳೆದ ಮೂರು ತಿಂಗಳಿಂದ ಜಟಾಪಟಿ ನಡೆದಿತ್ತು. ಗ್ರಾ.ಪಂ. ಅಧ್ಯಕ್ಷ ಮಾಲತೇಶ ನಾಯರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಯಾಗಿದ್ದು,ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬಾಕಿ ಉಳಿದಂತಾಗಿದೆ.

‘ಮಾಲತೇಶ ನಾಯರ್‌ 15 ತಿಂಗಳು ಅಧಿಕಾರ ನಡೆಸಿ, ಬಳಿಕ ಸದಸ್ಯ ಸುರೇಶ ತಳಗೇರಿ ಎಂಬುವರಿಗೆ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವುದಾಗಿ ಒಪ್ಪಂದವಾಗಿತ್ತು. ಆದರೆ, ಮಾಲತೇಶ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ.ಅವಿಶ್ವಾಸ ಮಂಡನೆ ಹಿನ್ನೆಲೆಯಲ್ಲಿ ಮಾಲತೇಶ ನಾಯರ್ ಪಂಚಾಯಿತಿ ಸದಸ್ಯರನ್ನು ತಮ್ಮತ್ತ ಸೆಳೆದುಕೊಳ್ಳಬಹುದು ಎಂಬ ಆತಂಕದಿಂದ ನಮ್ಮ 9 ಸದಸ್ಯರನ್ನು ಬೆಂಗಳೂರಿನ ರೆಸಾರ್ಟ್‌ಗೆ ಕಳಿಸಿಕೊಡಲಾಗಿತ್ತು’ ಎಂದುದೇವಸ್ಥಾನದ ಪ್ರಧಾನ ಅರ್ಚಕ ಸಂತೋಷ್‌ ಭಟ್‌ ಗುರೂಜಿ ‘ಪ್ರಜಾವಾಣಿ’ಗೆ ತಿಳಿಸಿದರು.

ಉಪವಿಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ ಅವರು ಅವಿಶ್ವಾಸ ಪ್ರಕ್ರಿಯೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT