ಶುಕ್ರವಾರ, ಸೆಪ್ಟೆಂಬರ್ 25, 2020
24 °C

ರೋಗಿಗಳಿಗೆ ಸಕಾಲದಲ್ಲಿ ಸ್ಪಂದಿಸಿ: ಡಿ.ಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಶಿಗ್ಗಾವಿ ತಾಲ್ಲೂಕು ಡೆಡಿಕೇಟೆಡ್ ಕೋವಿಡ್ ಹೆಲ್ತ್‌ಕೇರ್‌ ಸೆಂಟರ್‌ಗೆ ಬುಧವಾರ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಭೇಟಿ ನೀಡಿ ಆಮ್ಲಜನಕ ಪೂರೈಕೆ ಘಟಕ, ಹಾಸಿಗೆ ವ್ಯವಸ್ಥೆ ಕುರಿತಂತೆ ಪರಿಶೀಲಿಸಿದರು. 

ಕೊರೊನಾ ಪಾಸಿಟಿವ್ ವ್ಯಕ್ತಿಗಳ ಚಿಕಿತ್ಸೆಯಲ್ಲಿ ಲೋಪವಾಗಬಾರದು. ಆರೈಕೆಯಲ್ಲಿ ವ್ಯತ್ಯಯವಾಗಬಾರದು. ವೈದ್ಯಕೀಯ ವಿಭಾಗದಿಂದ ಯಾವುದೇ ದೂರುಗಳು ಬರದಂತೆ ಎಲ್ಲ ಮುನ್ನೆಚ್ಚರಿಕೆ ವಹಿಸುವಂತೆ ಶಿಗ್ಗಾವಿ ತಾಲ್ಲೂಕು ಆರೋಗ್ಯಾಧಿಕಾರಿಗೆ ಸೂಚನೆ ನೀಡಿದರು.

ಪ್ರೆಸರೈಸ್ ಆಕ್ಸಿಜನ್ ಪೂರೈಕೆಯಲ್ಲಿ ಲೋಪವಾಗದಂತೆ ಗರಿಷ್ಠ ಎಚ್ಚರಿಕೆ ಇರಬೇಕು. ಯಾವುದೇ ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ದುರಸ್ತಿಗೆ ಕ್ರಮವಹಿಸಬೇಕು. ವೈದ್ಯಕೀಯ ಸಿಬ್ಬಂದಿ ಹಾಗೂ ಅರೆವೈದ್ಯಕೀಯ ಸಿಬ್ಬಂದಿ ಸಕಾಲದಲ್ಲಿ ರೋಗಿಗಳಿಗೆ ಸ್ಪಂದಿಸಬೇಕು ಎಂದು ಸಲಹೆ ನೀಡಿದರು.

ಸಕಲ ವ್ಯವಸ್ಥೆ

ಜಿಲ್ಲಾ ಆಸ್ಪತ್ರೆಯಲ್ಲಿ 78 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದ್ದು, 10 ಐ.ಸಿ.ಯು. ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. 58 ಕೇಂದ್ರೀಕೃತ ಪ್ರೆಸರೈಸ್ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ. 36 ವೆಂಟಿಲೇಟರ್ ಅಳವಡಿಸಲಾಗಿದೆ. ಈಗಾಗಲೇ 55 ವೈದ್ಯಾಧಿಕಾರಿಗಳ ನೇಮಕಾತಿ ಮಾಡಿಕೊಳ್ಳಲಾಗಿದೆ. 20 ಶೂಶ್ರುಷಕರು, 25 ಲ್ಯಾಬ್‍ ಟೆಕ್ನೀಷಿಯನ್‌ಗಳ ನೇಮಕಾತಿ ಮಾಡಿಕೊಳ್ಳಲಾಗಿದೆ. 8000 ಸಾವಿರ ರ‍್ಯಾಪಿಡ್‌ ಆ್ಯಂಟಿಜೆನ್‌ ಕಿಟ್‍ಗಳು ಜಿಲ್ಲೆಗೆ ಪೂರೈಕೆಯಾಗಿವೆ. ಅಗತ್ಯಕ್ಕೆ ತಕ್ಕಂತೆ ವೈದ್ಯಕೀಯ ಸೌಲಭ್ಯಗಳ ಹೆಚ್ಚಳಕ್ಕೆ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 

ಜಿಲ್ಲಾ ಪಂಚಾಯಿತಿ ಸಿಇಒ ರಮೇಶ ದೇಸಾಯಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ ಇದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.