ಬುಧವಾರ, ಮೇ 18, 2022
25 °C
ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿಕೆ

ಖಾಸಗಿ ಶಾಲೆಗಳ ಸಮಸ್ಯೆಗೆ ಸ್ಪಂದನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ಕೋವಿಡ್ ಸಂಕಷ್ಟದಿಂದಾಗಿ ತರಗತಿ ಬೋಧನೆಯಲ್ಲಿ ವ್ಯತ್ಯಯವಾಗಿದೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಉಳಿದ ಶೈಕ್ಷಣಿಕ ಅವಧಿಯಲ್ಲಿ ಸಮರ್ಥವಾಗಿ ಬಳಸಿಕೊಂಡು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಪ್ರಯತ್ನಿಸೋಣ ಎಂದು ಕರೆ ನೀಡಿದರು.

ನಗರದ ಗುರುಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶದ ಸುಧಾರಣೆ ಕುರಿತು ಪ್ರೌಢಶಾಲಾ ಮುಖ್ಯಶಿಕ್ಷಕರಿಗೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಕೋವಿಡ್‍ನಿಂದಾಗಿ ಎಲ್ಲರೂ ಆರ್ಥಿಕ ಸಂಕಷ್ಟ ಎದುರಿಸಬೇಕಾಗಿದೆ. ದೇಶದಲ್ಲಿ ಅನೇಕ ಖಾಸಗಿ ಶಾಲೆಗಳು ಮುಚ್ಚಿಹೋಗಿವೆ. ಆದರೆ, ಅದೃಷ್ಟವಶಾತ್‌ ರಾಜ್ಯ ಹಾಗೂ ಜಿಲ್ಲೆಯಲ್ಲಿ ಯಾವುದೇ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ಹೋಗಿಲ್ಲ. ಖಾಸಗಿ ಶಾಲೆಗಳ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತೇವೆ. ನಿಮ್ಮ ಸಮಸ್ಯೆಗಳನ್ನು ಸರ್ಕಾರಕ್ಕೆ ತಲುಪಿಸುವ ಕೆಲಸ ಮಾಡುವುದು ಎಂದು ಭರವಸೆ ನೀಡಿದರು.

ವೇತನ ಕೊಡಲು ಕಷ್ಟ: ಖಾಸಗಿ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರು ಮಾತನಾಡಿ, ನಮಗೂ ವಿದ್ಯಾರ್ಥಿಗಳ ಹಾಗೂ ಶಿಕ್ಷಣದ ಬಗ್ಗೆ ಕಾಳಜಿ ಇದೆ. ಆದರೆ, ಸರ್ಕಾರದ ಸೂಚನೆಯಿಂದ ಬಹಳ ತೊಂದರೆಯಾಗಿದೆ. ದೊಡ್ಡ ನಗರ ಹಾಗೂ ಸಾಮಾನ್ಯ ನಗರಗಳಿಗೆ ಒಂದೇ ಶುಲ್ಕ ಇರುವುದಿಲ್ಲ. ಶುಲ್ಕ ವಿನಾಯಿತಿ ಮಾಡಿದರೆ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಹಾಗೂ ಆಡಳಿತ ಮಂಡಳಿ ಸಿಬ್ಬಂದಿಗೆ ವೇತನ ಪಾವತಿ ಹಾಗೂ ಕಟ್ಟಡ ನಿರ್ವಹಣೆ ಕಷ್ಟವಾಗುತ್ತದೆ ಎಂದು ತಮ್ಮ ಸಮಸ್ಯೆಯನ್ನು ಹೇಳಿಕೊಂಡರು.

ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್‌ ರೋಶನ್‌ ಮಾತನಾಡಿ, ‘ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಜೊತೆ ಈಗಾಗಲೇ ಸಭೆ ನಡೆಸಲಾಗಿದೆ. ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು