ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಅನರ್ಹರು ಪಡಿತರ ಚೀಟಿ ಹಿಂತಿರುಗಿಸಿ

Last Updated 31 ಮೇ 2021, 14:48 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲೆಯಲ್ಲಿ ಆರ್ಥಿಕವಾಗಿ ಸಬಲರು ಮತ್ತು ಇತರ ಅನರ್ಹರು ಹೊಂದಿರುವ ಅಂತ್ಯೋದಯ ಅನ್ನ ಮತ್ತು ಆದ್ಯತಾ (ಬಿಪಿಎಲ್ ಪಡಿತರ) ಚೀಟಿಗಳನ್ನು ಆಯಾ ತಾಲ್ಲೂಕಿನ ತಹಶೀಲ್ದಾರ್‌ ಕಚೇರಿಯ ಆಹಾರ ವಿಭಾಗಕ್ಕೆ ಜೂನ್ 30ರೊಳಗಾಗಿ ನೀಡಿ, ಆದ್ಯತೇತರ (ಎಪಿಎಲ್) ಪಡಿತರ ಚೀಟಿ ಪಡೆಯಲು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದ್ದಾರೆ.

ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಕಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಎಲ್ಲ ಕುಟುಂಬಗಳು ಅಂತ್ಯೋದಯ ಮತ್ತು ಆದ್ಯತಾ (ಬಿಪಿಎಲ್) ಚೀಟಿ ಪಡೆಯಲು ಅನರ್ಹರಾಗಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು ಅಂತ್ಯೋದಯ ಮತ್ತು ಆದ್ಯತಾ (ಬಿಪಿಎಲ್) ಚೀಟಿ ಪಡೆಯಲು ಅನರ್ಹರಾಗಿದ್ದಾರೆ.

ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್‌, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಹಾಗೂ ನಾಲ್ಕಕ್ಕಿಂತ ಹೆಚ್ಚಿಗೆ ಚಕ್ರದ ವಾಹನವನ್ನು ಹೊಂದಿರುವ ಎಲ್ಲಾ ಕುಟುಂಬಗಳು ಹಾಗೂ ಕುಟುಂಬದ ವಾರ್ಷಿಕ ಆದಾಯವು ₹1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಅಂತ್ಯೋದಯ ಅನ್ನ ಮತ್ತು ಆದ್ಯತಾ (ಬಿಪಿಎಲ್ ಪಡಿತರ) ಚೀಟಿ ಪಡೆಯಲು ಅನರ್ಹರಾಗಿದ್ದಾರೆ.

ಆರ್ಥಿಕವಾಗಿ ಸಬಲರು ಮತ್ತು ಉಳ್ಳವರು ಹೊಂದಿರುವ ಅಂತ್ಯೋದಯ ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳನ್ನು ಹಿಂದಿರುಗಿಸಲು ಪದೇ ಪದೇ ಮನವಿ ಮಾಡಲಾಗಿದೆ. ಆದರೂ, ಮತ್ತೊಮ್ಮೆ ದಂಡರಹಿತವಾಗಿ ಜೂನ್‌ 30ರೊಳಗಾಗಿ ಸ್ವಯಂ ಪ್ರೇರಿತವಾಗಿ ಅನರ್ಹ ಪಡಿತರ ಚೀಟಿಗಳನ್ನು ಹಿಂದಿರುಗಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ತಪ್ಪಿದಲ್ಲಿ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹಾಗೂ ಹಂಚಿಕೆ ಪಡೆದ ಆಹಾರ ಧಾನ್ಯಗಳ ಮಾರುಕಟ್ಟೆ ಮೌಲ್ಯವನ್ನು ವಸೂಲು ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT