ಹಾವೇರಿ: ‘ರಾಜ್ಯದ ವಿವಿಧ ಇಲಾಖೆಗಳ ಕಚೇರಿಗಳಿಂದ ₹ 6 ಸಾವಿರ ಕೋಟಿ ವಿದ್ಯುತ್ ಬಿಲ್ ಪಾವತಿ ಬಾಕಿಯಿದ್ದು, ಅದರ ವಸೂಲಿಗೆ ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆದಿದೆ’ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

‘ರಾಜ್ಯದಲ್ಲಿ ಪ್ರಸಕ್ತ ವರ್ಷ ಬೇಡಿಕೆಗೆ ತಕ್ಕಷ್ಟು ವಿದ್ಯುತ್ ಪೂರೈಸಲು ಇಲಾಖೆ ಸನ್ನದ್ಧವಾಗಿದೆ. ಅದಕ್ಕೆ ಬೇರೆ ರಾಜ್ಯಗಳಿಂದ 19,500 ಮೆಗಾ ವ್ಯಾಟ್ ವಿದ್ಯುತ್ ಖರೀದಿಸಲಾಗಿದೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

‘ಕಳೆದ ವರ್ಷ ಬರಗಾಲ ಇದ್ದ ಕಾರಣ ರಾಜ್ಯದಲ್ಲಿ ಒಂದು ತಿಂಗಳು ವಿದ್ಯುತ್ ಕೊರತೆಯಾಗಿತ್ತು. ಉಳಿದ 11 ತಿಂಗಳು ಸಮರ್ಪಕವಾಗಿ ವಿದ್ಯುತ್ ಪೂರೈಸಲಾಗಿದೆ. ರಾಜ್ಯದಲ್ಲಿ ಈ ವರ್ಷ ವಿದ್ಯುತ್ ಸಮಸ್ಯೆ ಇರುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.