ರೇಬಿಸ್ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ಹಾವೇರಿ: ಜಾನುವಾರು ಹತ್ಯೆ ಪ್ರತಿಬಂಧಕ ಸಂರಕ್ಷಣಾ ಅಧಿನಿಯಮದ ಬಗ್ಗೆ ಸರ್ಕಾರದ ಮಹತ್ವದ ನಿರ್ಧಾರ ಕೈಗೊಂಡಿದೆ. ಜಿಲ್ಲೆಯಲ್ಲಿ ಅಂತಹ ಪ್ರಕರಣಗಳು ಸಂಭವಿಸದಂತೆ ಪಶುವೈದ್ಯ ಇಲಾಖೆ ಎಚ್ಚರದಿಂದ ಕಾರ್ಯಾನಿರ್ವಹಿಸಬೇಕು ಎಂದು ಶಾಸಕ ನೆಹರು ಓಲೇಕಾರ ಹೇಳಿದರು.
ಸೋಮವಾರ ನಗರದ ಜಿಲ್ಲಾ ಪಾಲಿಕ್ಲಿನಿಕ್ ಪಶು ಆಸ್ಪತ್ರೆ ಆವರಣದಲ್ಲಿ ನಾಯಿ ಮತ್ತು ಬೆಕ್ಕುಗಳಿಗೆ ಉಚಿತ ರೇಬಿಸ್ ಲಸಿಕೆ ಕಾರ್ಯಕ್ರಮ ಮತ್ತು ಜಾನುವಾರು ಹಕ್ಕು ಪ್ರತಿಬಂಧಕ ಸಂರಕ್ಷಣೆ ಅಧಿನಿಯಮದ ಬಗ್ಗೆ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪಶುಸಂಗೋಪಾನ ಇಲಾಖೆ ಉಪನಿರ್ದೇಶಕ ಡಾ.ರಾಜೀವ ಎನ್. ಕೂಲೇರ ಮಾತನಾಡಿ, ಹುಚ್ಚು ನಾಯಿ ರೋಗದ ಲಕ್ಷಣಗಳು, ಮುಂಜಾಗ್ರತಾ ಕ್ರಮಗಳು ಮತ್ತು ಲಸಿಕೆಯ ಮಹತ್ವದ ಬಗ್ಗೆ ಪಶುವೈದ್ಯರಿಗೆ ಮತ್ತು ಶ್ವಾನ/ ಬೆಕ್ಕುಗಳ ಮಾಲೀಕರಿಗೆ ಮಾಹಿತಿ ನೀಡಿದರು.
ಸಹಾಯಕ ನಿರ್ದೇಶಕ ಡಾ.ಪರಮೇಶ ಎನ್. ಹುಬ್ಬಳ್ಳಿ ಅವರು ಜಾನುವಾರು ಹತ್ಯೆ ಪ್ರತಿಬಂಧಕ ಸಂರಕ್ಷಣಾ ಅಧಿನಿಯಮದ ಕಾಯ್ದೆ ಮತ್ತು ಕಾನೂನುಗಳ ಬಗ್ಗೆ ಪಶುವೈದ್ಯಕೀಯ ಸಿಬ್ಬಂದಿ ಮತ್ತು ಶ್ವಾನ, ಬೆಕ್ಕುಗಳ ಮಾಲೀಕರಿಗೆ ವಿವರಿಸಿದರು. ಪಾಲಿಕ್ಲಿನಿಕ್ ಮುಖ್ಯ ಪಶುವೈದ್ಯಾಧಿಕಾರಿ ಡಾ.ಹನುಮಂತ ಬಿ. ಸಣ್ಣಕ್ಕಿ ಎಲ್ಲ ಶ್ವಾನ ಮತ್ತು ಬೆಕ್ಕುಗಳಿಗೆ ಲಸಿಕೆ ಹಾಕಿದರು.
ಜಿಲ್ಲಾ ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ.ಎಸ್.ಡಿ.ಚಿಕ್ಕೇನಕೊಪ್ಪ, ಕಾರ್ಯನಿವಾಹಕ ಅಧಿಕಾರಿ ಡಾ.ಡಿ.ಸಿ.ಬಸವರಾಜ. ಪಶುವೈದ್ಯಾಧಿಕಾ ಡಾ.ತ್ರಿವೇಣಿ, ಜಾನುವಾರು ಅಭಿವೃದ್ಧಿ ಅಧಿಕಾರಿ ಎಸ್.ಎಫ್.ಕರಿಯಪ್ಪನವರ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.