ಭಾನುವಾರ, ಜುಲೈ 3, 2022
27 °C

ನವೀನ್ ಪಾರ್ಥಿವ ಶರೀರ ತನ್ನಿ: ಸಿಎಂಗೆ ಸೆರಗೊಡ್ಡಿ ಬೇಡಿದ ತಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ‘ನನ್ನ ಮಗನ ಪಾರ್ಥಿವ ಶರೀರವನ್ನು ಬೇಗ ತನ್ನಿ. ಕೊನೆಯದಾಗಿ ಅವನ ಮುಖ ನೋಡಲು ಅವಕಾಶ ಕಲ್ಪಿಸಿಕೊಡಿ’ ಎಂದು ಕಣ್ಣೀರಿಡುತ್ತಾ ಉಕ್ರೇನ್‌ನಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ ಗ್ಯಾನಗೌಡರ ತಾಯಿ ವಿಜಯಲಕ್ಷ್ಮಿ ಅವರು ಸೆರಗೊಡ್ಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಬೇಡಿಕೊಂಡರು. 

ತಂದೆ ಶೇಖರಪ್ಪ ಅವರಿಗೆ ರಾಜ್ಯ ಸರ್ಕಾರದ ವತಿಯಿಂದ ₹25 ಲಕ್ಷದ ಚೆಕ್‌ ವಿತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಪಾರ್ಥಿವ ಶರೀರ ತರಲು ಸರ್ವ ಪ್ರಯತ್ನ ಮಾಡುತ್ತಿದ್ದೇವೆ. ಆದಷ್ಟು ಬೇಗ ನಿಮ್ಮ ಬೇಡಿಕೆ ಈಡೇರಿಸುತ್ತೇವೆ. ದೊಡ್ಡ ಮಗ ಹರ್ಷ ಅವರ ಪಿಎಚ್‌ಡಿ ಮುಗಿದ ನಂತರ ಉತ್ತಮ ಉದ್ಯೋಗ ದೊರಕಿಸಿಕೊಡುತ್ತೇವೆ’ ಎಂದು ಸಿಎಂ ಸಾಂತ್ವನದ ನುಡಿಗಳನ್ನಾಡಿದರು.

ಇದನ್ನೂ ಒದಿ.. ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ವಿತರಿಸಿದ ಸಿಎಂ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು