ಹಿರೇಕೆರೂರು: ‘ಸಮಾಜದಲ್ಲಿ ಜಾತಿ ಮುಖ್ಯವಲ್ಲ ಜೀವನ ಮುಖ್ಯ ಎಂದು ತೋರಿಸಿಕೊಟ್ಟವರು ಮಡಿವಾಳ ಮಾಚಿದೇವರು‘ ಎಂದು ಶಾಸಕ ಯು.ಬಿ.ಬಣಕಾರ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಗುರವಾರ ಆಯೋಜಿಸಿದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಹಲವಾರು ವಚನಗಳನ್ನು ಬರೆದಿರುವ ಅವರು ಸಮಾಜದಲ್ಲಿರುವ ಅಧರ್ಮ, ಅಸಂಸ್ಕೃತಿಯ ಕೊಳಕನ್ನು ಹೋಗಲಾಡಿಸಿ ಕಾಯಕ ಯೋಗಿಯಾಗಿದ್ದರು. ಅಂತಹ ಮಹಾನ್ ವ್ಯಕ್ತಿಯ ಆದರ್ಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು‘ ಎಂದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ನೀಲೇಶ ಎಸ್.ಎಂ ಉಪನ್ಯಾಸ ನೀಡಿದರು.

ಹಿರೇಕೆರೂರು ತಹಶೀಲ್ದಾರ್ ಎಚ್.ಪ್ರಭಾಕರಗೌಡ, ಪ.ಪಂ ಸದಸ್ಯರಾದ ಮಹೇಂದ್ರ ಬಡಳ್ಳಿ, ಸನಾವುಲ್ಲಾ ಮಕಾನ್ದಾರ್, ಮಡಿವಾಳ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಮಡಿವಾಳರ, ತಾಲ್ಲೂಕು ಘಟಕದ ಅಧ್ಯಕ್ಷ ರಮೇಶ ಮಡಿವಾಳರ, ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಮಧುಶ್ರೀ ಮಡಿವಾಳರ, ಕ್ಷೇತ್ರ ಶಿಕ್ಷಣಾಧಿಕಾರಿ, ಎನ್.ಶ್ರೀಧರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.