ಹಾವೇರಿ: ‘ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ ನೀಡಲಾಗಿದೆ. ಮುಂದುವರಿದ ಜನಾಂಗದೊಂದಿಗೆ ಕಟ್ಟಕಡೆಯ ವ್ಯಕ್ತಿಯನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಮೂಲಕ ಅವರಿಗೆ ಸಮಾನ ಹಕ್ಕು ಹಾಗೂ ನ್ಯಾಯ ಒದಗಿಸುವುದು ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಉದ್ದೇಶವಾಗಿದೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಹೇಳಿದರು.

ನಗರದ ಹಾವೇರಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೆಂಗಳೂರಿನ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಅಂಗವಾಗಿ ಬುಧವಾರ ಆಯೋಜಿಸಿದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಋತು ಚಕ್ರ ನೈರ್ಮಲ್ಯ ನಿರ್ವಹಣೆ ಮತ್ತು ಪೋಕ್ಸೊ ಕಾಯ್ದೆ ಕುರಿತು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯಗಳ ವಾರ್ಡನ್ ಹಾಗೂ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪೋಕ್ಸೊ ಪ್ರಕರಣ ಹೆಚ್ಚಳ: ‘ಪೋಕ್ಸೊ ಪ್ರಕರಣದಲ್ಲಿ ದಂಡ ಹಾಗೂ ಶಿಕ್ಷೆ ಕುರಿತು ಎಷ್ಟೇ ಅರಿವು ಮೂಡಿಸಿದರೂ ಜಿಲ್ಲೆಯಲ್ಲಿ ಪ್ರಕರಣಗಳು ಕಡಿಮೆಯಾಗಿಲ್ಲ. ಹಾಗಾಗಿ ಯಾವ ರೀತಿ ತಿಳಿವಳಿಕೆ ನೀಡಬೇಕು ಎಂದು ತಿಳಿಯದಾಗಿದೆ. 16ರಿಂದ 20 ವಯೋಮಾನದವರು ತಮ್ಮ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುವುದು ಒಳ್ಳೆಯದು. ಕೆಟ್ಟದರಿಂದ ದೂರ ಇರಬೇಕು. ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಂಡು ಇತರರಿಗೂ ತಿಳಿವಳಿಕೆ ನೀಡಬೇಕು’ ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ ಮಾತನಾಡಿದರು. ಸ್ತ್ರೀರೋಗ ತಜ್ಞೆ ಅಕ್ಷತಾ ಅವರು ಋತು ಚಕ್ರ ನೈರ್ಮಲ್ಯ ನಿರ್ವಹಣೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪೆನಲ್ ವಕೀಲೆ ರೆಹಾನಾ ಚನ್ನಪಟ್ಟಣ ಅವರು ಪೋಕ್ಸೊ ಕಾಯ್ದೆ-2012 ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್. ಮಜೀದ್ ಅವರು ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ, ಡಾ. ಪರಸಪ್ಪ ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣ ಸಂಗಳದ ಸ್ವಾಗತಿಸಿದರು. ಮಂಗಳಾ ಅಳಗುಂಡಗಿ ಕಾರ್ಯಕ್ರಮ ನಿರೂಪಿಸಿದರು. ಕೃಷ್ಣ ಹುರಳಿಕುಪ್ಪಿ ವಂದಿಸಿದರು.

‘ಬಾಲ್ಯವಿವಾಹ ತಡೆಗೆ ಕೈಜೋಡಿಸಿ’

‘ಮಕ್ಕಳಿಗೆ ಒಳ್ಳೆಯ ಸ್ಪರ್ಶ ಹಾಗೂ ಕೆಟ್ಟ ಸ್ಪರ್ಶದ ಬಗ್ಗೆ ಅರಿವು ಮೂಡಿಸುವುದರಿಂದ ಪೋಕ್ಸೊ ಪ್ರಕರಣಗಳನ್ನು ಕಡಿಮೆ ಮಾಡಬಹುದು. ಪಾಲಕರು ಹಾಗೂ ವಿದ್ಯಾರ್ಥಿ ನಿಲಯಗಳ ವಾರ್ಡನ್ಗಳು ಮಕ್ಕಳ ಚಲನವಲನ ಗಮನಿಸಬೇಕು’ ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ ಕೆ.ಎನ್. ಹೇಳಿದರು. ‘ಬಾಲ್ಯ ವಿವಾಹ ಪ್ರಕರಣ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು. ಬಾಲ್ಯವಿವಾಹ ತಡೆಗೆ ಕೈಜೋಡಿಸಬೇಕು. ಮಾಹಿತಿ ನೀಡಿದವರ ಹೆಸರನ್ನು ಗೋಪ್ಯವಾಗಿ ಇಡಲಾಗುವುದು. ವಿದ್ಯಾರ್ಥಿನಿಯರು ಆರೋಗ್ಯದ ಹಿತದೃಷ್ಟಿಯಿಂದ ಋತುಚಕ್ರ ಸಮಯದಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.