ಶನಿವಾರ, ನವೆಂಬರ್ 28, 2020
18 °C

‘ಜೆಡಿಎಸ್ ವರಿಷ್ಠರ ನಡೆಯಿಂದ ಬೇಸರ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಜಿಲ್ಲೆಯಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಜೆಡಿಎಸ್ ವರಿಷ್ಠರು ಅನುಸರಿಸುತ್ತಿರುವ ಧೋರಣೆಗಳು ಬೇಸರ ತರಿಸಿವೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಜಯ ಡಾಂಗೆ ತಿಳಿಸಿದ್ದಾರೆ.

ಹಲವಾರು ವರ್ಷಗಳಿಂದ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಪಕ್ಷವನ್ನು ಸಂಘಟಿಸುತ್ತಾ ಬರುತ್ತಿದ್ದೇವೆ. ಜಿಲ್ಲೆಯಲ್ಲಿ ಇತ್ತೀಚೆಗೆ ಪಕ್ಷಕ್ಕೆ ನೂತನ ಜಿಲ್ಲಾ ಘಟಕದ ಅಧ್ಯಕ್ಷರ ನೇಮಕದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಪಕ್ಷ ಕಟ್ಟಿದ ಪ್ರಮುಖರನ್ನು ವಿಶ್ವಾಸಕ್ಕೆ ತಗೆದುಕೊಂಡಿಲ್ಲ. ಇದು ಕಾರ್ಯರ್ತರಿಗೆ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ. 

ಪಶ್ಚಿಮ ಪದವೀಧರರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಜೆಡಿಎಸ್‌ ಅಭ್ಯರ್ಥಿ ತಟಸ್ಥರಾದ ಕಾರಣ ಕಾರ್ಯಕರ್ತರಿಗೆ ಆಘಾತ ಉಂಟಾಗಿದೆ. ಈ ಹಿಂದೆ ಹಿರೇಕೆರೂರು ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಸಂದರ್ಭದಲ್ಲೂ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಿಗೆ, ಮುಖಂಡರಿಗೆ ಮನ್ನಣೆ ದೊರೆಯಲಿಲ್ಲ. ಪಕ್ಷದ ವರಿಷ್ಠರ ಏಕಪಕ್ಷೀಯ ನಿರ್ಣಯಗಳಿಂದ ತೀವ್ರ ಆಘಾತವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

ಶೀಘ್ರದಲ್ಲೇ ತಮ್ಮ ಬೆಂಬಲಿಗರ ಹಾಗೂ ಮುಖಂಡರ ಸಭೆ ನಡೆಸಿ, ತಮ್ಮ ಮುಂದಿನ ನಿರ್ಧಾರವನ್ನು ಪ್ರಕಟಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.