ಸವಣೂರು: ಪಟ್ಟಣದ ಹೊರವಲಯದಲ್ಲಿ ಸ್ವಚ್ಛ ಭಾರತ ಅಭಿಯಾನದಡಿ ಕೊಳಚೆ ನೀರು ಸಂಸ್ಕರಣ ಘಟಕ ನಿರ್ಮಾಣಕ್ಕೆ ಭೂಮಿಪೂಜೆ ನಡೆಸುವ ಕಾರ್ಯಕ್ರಮದ ವೇಳೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶಿಸುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಕ್ಕೆ, ಶಾಸಕ ಯಾಸೀರ ಅಹ್ಮದಖಾನ ಪಠಾಣ ವಿರೋಧ ಪಕ್ಷದ ವಿರುದ್ಧ ಕಿಡಿಕಾರಿದರು.

ಸಣ್ಣಪುಟ್ಟ ವಿಚಾರಗಳಿಗೂ ರಾಜಕೀಯ ಬಣ್ಣ ಹಚ್ಚಿ ಅಭಿವೃದ್ಧಿ ಕಾರ್ಯಗಳನ್ನು ಅಡ್ಡಿಪಡಿಸುವುದು ವಿಷಾದನೀಯ. ಸವಣೂರು ಪಟ್ಟಣ ತಿಪ್ಪೆಗುಂಡಿಯಂತಾಗಿದ್ದು, ಎಲ್ಲೆಡೆ ಕೊಳಚೆ ಸಮಸ್ಯೆ ಹೆಚ್ಚಾಗಿದೆ. ಇದನ್ನು ನಿವಾರಿಸಲು ಸರ್ಕಾರದಿಂದ ₹8.86 ಲಕ್ಷ ಅನುದಾನ ಮಂಜೂರಾಗಿದ್ದು, 26 ಎಕರೆ ಸರ್ಕಾರಿ ಜಮೀನಿನಲ್ಲಿ 9.16 ಎಕರೆ ಪ್ರದೇಶವನ್ನು ಸಂಸ್ಕರಣ ಘಟಕಕ್ಕೆ ಮೀಸಲಿಡಲಾಗಿದೆ. ಈ ಯೋಜನೆ ಜನಹಿತದ ದೃಷ್ಟಿಯಿಂದ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.

ಕೇಂದ್ರ ಸಚಿವರ ಆಗಮನದ ವಿಚಾರವನ್ನು ಮುಂಚಿತವಾಗಿ ತಿಳಿಸಿದ್ದರೆ ಕಾರ್ಯಕ್ರಮವನ್ನು ಮುಂದೂಡಲು ಯಾವುದೇ ಅಭ್ಯಂತರ ಇರಲಿಲ್ಲ. ಆದರೆ ಕಾರ್ಯಕ್ರಮ ಆರಂಭಕ್ಕೂ ಅರ್ಧ ಗಂಟೆ ಮೊದಲು ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಪೆಂಡಾಲ್ ಕಿತ್ತೆಸೆದು ಗಲಾಟೆ ಮಾಡುವುದು ಶೋಭೆಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿರೋಧ ಪಕ್ಷದವರು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡುತ್ತಿದ್ದು, ತಮ್ಮದೇ ಸರ್ಕಾರದ ಯೋಜನೆಗಳನ್ನು ಹಳೆಯ ಸರ್ಕಾರದ ಕಾರ್ಯಕ್ರಮವೆಂದು ಬಿಂಬಿಸುತ್ತಿದ್ದಾರೆ ಎಂದು ಆರೋಪಿಸಿದರು. “ಸಾಮಾಜಿಕ ಜಾಲತಾಣಗಳಲ್ಲಿ ಏನೇನೋ ಮಾತನಾಡುವುದರಲ್ಲಿ ಅರ್ಥವಿಲ್ಲ ಎಂದು ಕಿಡಿಕಾರಿದರು.

ತಮ್ಮ ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ಸಾವಿರಾರು ಕೋಟಿ ಅನುದಾನ ತರಲಾಗಿದೆ. ಕುಡಿಯುವ ನೀರಿಗಾಗಿ ಮಾತ್ರವೇ ₹350 ಕೋಟಿ ಮೀಸಲಿಡಲಾಗಿದೆ. ಎಸ್.ಟಿ.ಪಿ. ಯೋಜನೆಯೂ ಸರ್ಕಾರದ ಅನುಮೋದನೆಯಿಂದ ನಡೆಯುತ್ತಿದೆ. ಕೇಂದ್ರ ಸರ್ಕಾರ ಕರ್ನಾಟಕದಿಂದ ಲಕ್ಷಾಂತರ ಕೋಟಿ ತೆರಿಗೆ ಪಡೆಯುತ್ತಿದ್ದರೂ, ರಾಜ್ಯಕ್ಕೆ ಕಡಿಮೆ ಪ್ರಮಾಣದಲ್ಲಿ ಅನುದಾನ ನೀಡುತ್ತಿದೆ ಎಂಬ ಅಸಮಾಧಾನವನ್ನೂ ವ್ಯಕ್ತಪಡಿಸಿದರು. ಶಿಗ್ಗಾಂವಿ–ಸವಣೂರು ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯದಿಂದ ಕೆಲಸ ಮಾಡಬೇಕು. ಸಿ.ಆರ್.ಎಫ್, ಯು.ಜಿ.ಸಿ. ಅನುದಾನಗಳನ್ನು ತಂದು ಉತ್ತಮ ಆಸ್ಪತ್ರೆಗಳು ಹಾಗೂ ಕೈಗಾರಿಕೆಗಳನ್ನು ಸ್ಥಾಪಿಸಬೇಕೆಂದು ಅವರು ಮನವಿ ಮಾಡಿದರು.

ಇದೇ ವೇಳೆ, ವಿರೋಧ ಪಕ್ಷದವರು ತಮ್ಮ ಹೆಸರನ್ನು ನಾಮಫಲಕದಲ್ಲಿ ಕೆತ್ತಿಸಿಕೊಳ್ಳುವುದನ್ನೇ ಟೀಕಿಸುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ‘ಜನರು ನಮಗೆ ಅಧಿಕಾರ ನೀಡಿದ್ದಾರೆ. ಅಭಿವೃದ್ಧಿ ಕೆಲಸ ಮಾಡುತ್ತಿರುವ ನಮಗೆ ಹೆಸರು ಕೆತ್ತಿಸಿಕೊಳ್ಳುವುದು ತಪ್ಪೇನಲ್ಲ ಎಂದು ಪ್ರಶ್ನಿಸಿದರು. ಒಟ್ಟಾರೆ, ಅಭಿವೃದ್ಧಿ ವಿಚಾರದಲ್ಲಿ ಸಹಕಾರ ನೀಡುವ ಬದಲು ಅಡ್ಡಿಪಡಿಸುವ ರಾಜಕೀಯ ಮನೋಭಾವವನ್ನು ವಿರೋಧ ಪಕ್ಷ ತೊರೆಯಬೇಕು‘ ಎಂದು ಶಾಸಕರು ತೀವ್ರವಾಗಿ ಎಚ್ಚರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-22-1524652833

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.