ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸವಣೂರು: ಯುವಕನ ಮೇಲೆ ಮಚ್ಚಿನಿಂದ ಹಲ್ಲೆ

Published 20 ಜೂನ್ 2024, 15:30 IST
Last Updated 20 ಜೂನ್ 2024, 15:30 IST
ಅಕ್ಷರ ಗಾತ್ರ

ಸವಣೂರು: ಗ್ಯಾರೇಜಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆಗೆ ಯತ್ನಿಸಿ ಪರಾರಿಯಾದ ಘಟನೆ ಸವಣೂರು ಪಟ್ಟಣದ ಗೋಕಾಕ್ ಸರ್ಕಲ್ ಬಳಿ ಇರುವ ಗ್ಯಾರೇಜ್ ಹಿಂಭಾಗದಲ್ಲಿ ನಡೆದಿದೆ.

ಅಬಿದ್ ಅಲ್ಲಾಬಕಷ ಚೌದರಿ (30) ಗಾಯಗೊಂಡ ವ್ಯಕ್ತಿ.

ಎರಡು ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಅಬಿದ್ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳೀಯರು ಹಾಗೂ ಸ್ನೇಹಿತರು ಸವಣೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಗಾಯಾಳುವನ್ನು ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.

ತಲೆ, ಕೈ ಹಾಗೂ ದೇಹದ ಇತರೆ ಭಾಗಗಳಿಗೆ ತೀವ್ರ ಗಾಯಗಳಾಗಿರುವುದರಿಂದ ಅವರನ್ನು ಹುಬ್ಬಳ್ಳಿಯ ಸೆಕ್ಯೂರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಹಿಂದೆ ಸವಣೂರು ಪಟ್ಟಣದ ಕಾರಡಗಿ ರಸ್ತೆಯಲ್ಲಿ ಅನ್ವರ್‌ಶೇಖ್ ಮೋಮಿನ್ ಅಲಿಯಾಸ್ ಟೈಗರ್ ಅನ್ವರ್ ಎಂಬುವವರನ್ನು ಬರ್ಬರವಾಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ ಪ್ರಕರಣದಲ್ಲಿ ಅಬಿದ್ ಎರಡನೇ ಆರೋಪಿ. ಜಾಮೀನಿನ ಮೇಲೆ ಹೊರಬಂದು ಗ್ಯಾರೇಜ್ ನಡೆಸುತ್ತಿದ್ದರು. ಈ ಪ್ರಕರಣದ ಹಿನ್ನೆಲೆಯಲ್ಲಿ ಅಬೀದ್ ಮೇಲೆ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT