ಸವಣೂರು: ‘ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂದು ಆರೋಪಿಸಿ ಪಟ್ಟಣದ ಉರ್ದು ಸರ್ಕಾರಿ ಶಾಲೆಯ ಶಿಕ್ಷಕನನ್ನು ಥಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿ ಅನೈತಿಕ ಪೊಲೀಸ್ಗಿರಿ ಪ್ರದರ್ಶಿಸಿದವರನ್ನು ಬಂಧಿಸಬೇಕು’ ಎಂದು ಒತ್ತಾಯಿಸಿ ಸೋಮವಾರ ಕರೆ ನೀಡಿದ್ದ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಡಿ. 10ರಂದು ನಡೆದಿದ್ದ ಘಟನೆಯನ್ನು ಖಂಡಿಸಿದ್ದ ಹಿಂದೂಪರ ಸಂಘಟನೆಗಳು ಹಾಗೂ ಸ್ಥಳೀಯರು, ಬಂದ್ಗೆ ಕರೆ ನೀಡಿದ್ದರು. ಪಟ್ಟಣದ ಭರಮಲಿಂಗೇಶ್ವರ ವೃತ್ತದಲ್ಲಿ ಹಿಂದೂಪರ ಸಂಘಟನೆಗಳ ಪದಾಧಿಕಾರಿಗಳು ಸೋಮವಾರ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಆರಂಭದಲ್ಲಿ, ಭಾನುವಾರ ನಿಧನರಾದ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ನಂತರ, ಮಾರುಕಟ್ಟೆಯ ಪ್ರಮುಖ ರಸ್ತೆ ಮೂಲಕ ಪ್ರತಿಭಟನಾ ಮೆರವಣಿಗೆ ಆರಂಭಿಸಿದರು. ತಹಶೀಲ್ದಾರ್ ಕಚೇರಿಯವರೆಗೂ ಮೆರವಣಿಗೆ ನಡೆಸಿ ತಹಶೀಲ್ದಾರ್ ರವಿಕುಮಾರ ಕೊರವರ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ರವಾನಿಸಿದರು.

ಸವಣೂರು ಬಂದ್ಗೆ ಸ್ವ-ಇಚ್ಚೆಯಿಂದ ಬೆಂಬಲ ಸೂಚಿಸಿದ ಹಲವು ವ್ಯಾಪಾರಸ್ಥರು, ಅಂಗಡಿಗಳನ್ನು ಮುಚ್ಚಿದ್ದರು. ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಮೆರವಣಿಗೆ ಸಂದರ್ಭದಲ್ಲಿ ನಗರದ ಹಲವು ಅಂಗಡಿಯವರು ಸ್ವಯಂಪ್ರೇರಿತರಾಗಿ ಬಾಗಿಲು ಮುಚ್ಚಿ, ಬಂದ್ಗೆ ಬೆಂಬಲ ಸೂಚಿಸಿದರು. ಶಾಂತಿಯುತವಾಗಿ ಬಂದ್ ಮುಕ್ತಾಯಗೊಂಡಿತು. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು.

ಬಂದ್ನಲ್ಲಿ ಭಾಗವಹಿಸಿದ್ದ ಬಿಜೆಪಿ ಮಂಡಲದ ನಿಕಟಪೂರ್ವ ಅಧ್ಯಕ್ಷ ಗಂಗಾಧರ ಬಾಣದ ಮಾತನಾಡಿ, ‘ಶಿಕ್ಷಕನ ಕರ್ತವ್ಯಕ್ಕೆ ಅಡ್ಡಿಪಡಿಸಿ ಮಾರಣಾಂತಿಕ ಹಲ್ಲೆ ನಡೆಸಿ ಕೊರಳಲ್ಲಿ ಚಪ್ಪಲಿ ಹಾರ ಹಾಕಿ ಶಾಲಾ ಆವರಣದಿಂದ ಮುಖ್ಯ ಮಾರುಕಟ್ಟೆಯ ಮೂಲಕ ಪೊಲೀಸ್ ಠಾಣೆಯವರೆಗೆ ಮೆರವಣಿಗೆ ಮಾಡಲಾಗಿದೆ. ಶಿಕ್ಷಕನ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಗುಂಡಾವರ್ತನೆ ತೋರಲಾಗಿದೆ. ಅನೈತಿಕ ಪೊಲೀಸ್ಗಿರಿ ತೋರಿದ ಆರೋಪಿತರನ್ನು ಮುಂದಿನ ಎರಡು ದಿನದೊಳಗೆ ಬಂಧಿಸಬೇಕು. ಇಲ್ಲದಿದ್ದರೆ, ಜಿಲ್ಲೆಯಾದ್ಯಂತ ಹೋರಾಟ ಆರಂಭಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಮನವಿ ಸ್ವೀಕರಿಸಿದ ತಹಶೀಲ್ದಾರ್ ರವಿಕುಮಾರ ಕೊರವರ, ‘ಆರೋಪಿಗಳ ಬಂಧನ ಪ್ರಕ್ರಿಯೆ ನಡೆಯುತ್ತಿದೆ. ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಜರುಗಿಸಲಾಗುವುದು’ ಎಂದರು.

ಮುಖಂಡರಾದ ಮೈಲಾರಪ್ಪ ತಳ್ಳಿಹಳ್ಳಿ, ಶಿವಪುತ್ರಪ್ಪ ಕಲಕೋಟಿ, ಸುಭಾಷ ಗಡೆಪ್ಪನವರ, ಬಸನಗೌಡ ಕೊಪ್ಪದ, ಹನಮಂತಗೌಡ ಮುದಿಗೌಡ್ರ, ಮಾಲತೇಶ ಬಿಜ್ಜೂರ, ಪರಶುರಾಮ ಈಳಿಗೇರ, ಈರಣ್ಣ ಸಾಲಿಮಠ, ಹೊನ್ನಪ್ಪ ಕೊಳ್ಳವರ, ಗಾಳೇಪ್ಪ ದೊಡ್ಡಪೂಜಾರ, ಮಹೇಶ ಮುದುಗಲ್, ಮಹೇಶ ಜಡಿ, ಶ್ರೀಕಾಂತ್ ಅಜ್ಜಣ್ಣನವರ, ಡಿ.ಎಂ. ಸಾಲಿ, ಪ್ರವೀಣ ಬಾಲೇಹೊಸೂರ, ಶ್ರೀನಿವಾಸ್ ಗಿತ್ತೆ, ದುರಗಪ್ಪ ಗಡೇದ, ಶಂಕರ ಪಾಟೀಲ, ಚಿದಾನಂದ ಬಡಿಗೇರ, ನಿಂಗಪ್ಪ ಬಂಕಾಪುರ, ಶ್ರೀಕಾಂತ್ ತಿಮ್ಮಣ್ಣವರ, ಪಕ್ಕೀರೇಶ ದೇವಗಿರಿ, ವಿನಾಯಕ ಕುಲಕರ್ಣಿ, ಅರುಣ ಮೆಕ್ಕಿ, ನಿಂಗಪ್ಪ ಬಸನಾಳ, ಕಿರಣಕುಮಾರ ವಿವೇಕವಂಶಿ ಹಾಗೂ ಇತರರು ಇದ್ದರು.

ಶಾಂತಿಯುತವಾಗಿ ಬಂದ್ ಮುಕ್ತಾಯ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಭದ್ರತೆ ತಹಶೀಲ್ದಾರ್ಗೆ ಮನವಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.