ಹಾವೇರಿ: ‘ರಾಜ್ಯದ ಪರಿಶಿಷ್ಟ ಸಮುದಾಯದವರ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನವನ್ನು ಅನ್ಯ ಯೋಜನೆಗಳಿಗೆ ನೀಡುತ್ತಿರುವುದು ಖಂಡನೀಯ’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ಪದಾಧಿಕಾರಿಗಳು ಆಕ್ರೋಶ ಹೊರಹಾಕಿದ್ದಾರೆ.

ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ನಿಯೋಗದ ಮೂಲಕ ಗುರುವಾರ ಭೇಟಿ ನೀಡಿದ್ದ ಪದಾಧಿಕಾರಿಗಳು, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ರವಾನಿಸಿದರು.

‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನ ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿ ಅವಕಾಶಗಳನ್ನು ಶಾಸನ ಬದ್ದವಾಗಿ ಒದಗಿಸಲು ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ ಕಾಯ್ದೆ–2013 ಜಾರಿಗೊಳಿಸಲಾಗಿದೆ. ಇದೇ ಕಾಯ್ದೆಯ ಕಲಂ 7ಸಿ ದುರ್ಬಳಕೆ ಮಾಡಿಕೊಂಡಿರುವ ಸರ್ಕಾರ, ಪರಿಶಿಷ್ಟರ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸುತ್ತಿದೆ. ಇದರಿಂದಾಗಿ ಪರಿಶಿಷ್ಟ ಸಮುದಾಯದವರ ಅಭಿವೃದ್ಧಿಗೆ ಪೆಟ್ಟು ಬಿದ್ದಿದೆ. ಕಲಂ 7ಸಿ ರದ್ದುಪಡಿಸಬೇಕು’ ಎಂದು ಪದಾಧಿಕಾರಿಗಳು ದೂರಿದರು.

‘2024–25 ಹಾಗೂ 2025–26ನೇ ಸಾಲಿನ ಪರಿಶಿಷ್ಟದ ಅನುದಾನವ್ನನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗಿದೆ. ಪರಿಶಿಷ್ಟರಿಗೆ ಸೇರಬೇಕಿದ್ದ ಹಣವನ್ನು ಕಿತ್ತುಕೊಳ್ಳುವ ಮೂಲಕ ಸರ್ಕಾರವೇ ನೇರವಾಗಿ ಅಸ್ಪೃಶ್ಯತೆ ಆಚರಣೆ ಮಾಡುತ್ತಿದೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಅನ್ಯ ಯೋಜನೆಗಳಿಗೆ ವ್ಯಯಿಸಿರುವ ಹಣವನ್ನು ವಾಪಸು ಪಡೆದು, ಪರಿಶಿಷ್ಟರ ಅಭಿವೃದ್ಧಿಗೆ ನೀಡಬೇಕು’ ಎಂದು ಆಗ್ರಹಿಸಿದರು.

‘ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ, ಪರಿಶಿಷ್ಟರ ವಿರೋಧಿ ಧೋರಣೆ ಅನುಸರಿಸಿತ್ತು. ಅದೇ ಕಾರಣಕ್ಕೆ ಬಿಜೆಪಿಗೆ ಸಮುದಾಯದ ಜನರು ತಕ್ಕ ಪಾಠ ಕಲಿಸಿದರು. ಕಾಂಗ್ರೆಸ್ ಪಕ್ಷ ಬೆಂಬಲಿಸಿದರು. ಇನ್ನು ಕಾಂಗ್ರೆಸ್ನವರು ಮರೆಯಬಾರದು. ಪರಿಶಿಷ್ಟರಿಗೆ ಅನ್ಯಾಯ ಮಾಡಿದರೆ, ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ಗೆ ಪಾಠ ಕಲಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

‘ಸರ್ಕಾರದ 36 ಇಲಾಖೆಗಳ ಬ್ಯಾಕ್ಲಾಗ್ ಹುದ್ದೆಗಳ ಕುರಿತು ಅಂಕಿ–ಅಂಶ ಕುರಿತು ಇಲಾಖೆ ಮುಖ್ಯಸ್ಥರು ಮಾಹಿತಿ ನೀಡುತ್ತಿಲ್ಲ. ಇಂಥ ಮುಖ್ಯಸ್ಥರ ಮೇಲೆ ಎಸ್.ಸಿ.–ಎಸ್.ಟಿ. ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಪರಿಶಿಷ್ಟರ ಹಣವನ್ನು ಬೇರೆ ಕಡೆ ಬಳಸುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಒಳ ಮೀಸಲಾತಿಯನ್ನು ತ್ವರಿತವಾಗಿ ಜಾರಿಗೊಳಿಸಿ, ಅರ್ಹರಿಗೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದರು.

‘ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತರ, ಡಿಪ್ಲೊಮಾ, ಐಟಿಐ, ವೈದ್ಯಕೀಯ, ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಎಸ್.ಸಿ.,ಎಸ್.ಟಿ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಬೇಕು’ ಎಂದು ಒತ್ತಾಯಿಸಿದರು.

ಡಿಎಸ್ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ, ಮಾಲತೇಶ ಯಲ್ಲಾಪುರ, ಮಂಜಪ್ಪ ಮರೋಳ, ರೇಣುಕಾ ಬಡಕ್ಕಣ್ಣನವರ, ಬಸಣ್ಣ ಮುಗಳಿ, ಸೋಮು ಮಾಳಗಿ, ಹನಮಂತಪ್ಪ ಹರಿಜನ, ಬಸವರಾಜ ತಡಸದ, ಮಹೇಶಪ್ಪ ಹರಿಜನ ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.