ಬ್ಯಾಡಗಿ: ‘ಪಟ್ಟಣದ ಬಡಾವಣೆಯ ಶಾಸಕರ ಮಾದರಿ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲೆಯನ್ನಾಗಿ ಉನ್ನತೀಕರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ(ಪ್ರೌಢ) ಆದೇಶ ಹೊರಡಿಸಿದ್ದಾರೆ’ ಎಂದು ಬೆಳಗಾವಿ ಕಂದಾಯ ವಿಭಾಗದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಎಸ್.ಆರ್.ಪಾಟೀಲ ತಿಳಿಸಿದರು.

ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಡಾವಣೆ ಶಾಲೆಯಲ್ಲಿ 7ನೇ ತರಗತಿಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿದೆ. ಪ್ರೌಢಶಾಲೆ ಆರಂಭಕ್ಕೆ ಸಾಕಷ್ಟು ವರ್ಗ ಕೋಣೆಗಳಿವೆ. ವಿಶಾಲವಾದ ಜಾಗ ಇರುವುದನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಗಮನಕ್ಕೆ ತಂದು ಮನವಿ ಮಾಡಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕರ ಮಾದರಿ ಪ್ರಾಥಮಿಕ ಶಾಲೆಯನ್ನು ಉನ್ನತೀಕರಿಸಿ ಸರ್ಕಾರ ಆದೇಶ ಹೊರಡಿಸಿದೆ. ಇನ್ನೊಂದು ಸರ್ಕಾರಿ ಪ್ರೌಢ ಶಾಲೆ ಆರಂಭಕ್ಕೆ ಅನುಕೂಲವಾಯಿತು. ಪಟ್ಟಣದ ಜನರು ಮಕ್ಕಳನ್ನು ಈ ಶಾಲೆಗೆ ದಾಖಲಿಸಬೇಕು’ ಎಂದು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.