ರಾಣೆಬೆನ್ನೂರು: ದಿನ ನಿತ್ಯ ಜೀವನದಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಜ್ಞಾನ ಹೆಚ್ಚಿಸಲು ವಿಜ್ಞಾನ ಹಾಗೂ ವಿಜ್ಞಾನ ನಾಟಕ ಸ್ಪರ್ಧೆಗಳನ್ನು ಏರ್ಪಡಿಸುತ್ತಿದೆ. ಹೊಸ ಅವಿಷ್ಕಾರಗಳು ಮಾನವ ವಿಕಾಸದ ಮೈಲಿಗಲ್ಲು, ವಿದ್ಯಾರ್ಥಿಗಳು ವಿಜ್ಞಾನದ ಮಾದರಿಯಲ್ಲಿ ಸಂಶೋಧನಾ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಾಮಸುಂದರ ಅಡಿಗ ಹೇಳಿದರು.

ಇಲ್ಲಿನ ಮೃತ್ಯುಂಜಯನಗರದ ಎಂಕೆ ಪಿಯು ಕಾಲೇಜಿನ ಸಭಾಂಗಣದಲ್ಲಿ ಈಚೆಗೆ ಉಪ ನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ತಾಲ್ಲೂಕು ಮಟ್ಟದ ಪ್ರೌಢ ಶಾಲೆಗಳ ವಿಜ್ಞಾನ ಮತ್ತು ಗಣಿತ ವಿಷಯ ವೇದಿಕೆಗಳ ಆಶ್ರಯದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪ್ರೌಢಶಾಲೆಗಳ ವಿಜ್ಞಾನ ವಿಚಾರ ಗೋಷ್ಠಿ ಮತ್ತು ವಿಜ್ಞಾನ ನಾಟಕ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಂ ಕೆ ಪಿಯು ಕಾಲೇಜಿನ ಮುಖ್ಯಸ್ಥ ಆರ್.ಎಸ್.ಯಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಿಇಟಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಸಿ.ವಿ.ಅಡಿವೇರ, ಕ್ಷೇತ್ರ ಸಮನ್ವಯಾಧಿಕಾರಿ ಮಂಜು ನಾಯ್ಕ, ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಪ್ರಭಾಕರ ಚಿಂದಿ, ವಿಜ್ಞಾನ ವೇದಿಕೆ ಅಧ್ಯಕ್ಷ ಪ್ರಭು ಎರೇಶೀಮಿ, ಎಂ.ಎಂ.ಮಾಗನೂರ, ಮೃತ್ಯುಂಜಯ ಅಂಗಡಿ, ನಾಗರಾಜ ಮುತ್ತೂರ, ರಮೇಶ ಅಳಲಗೇರಿ, ಬಿಆರ್ಪಿಗಳಾದ ಗಂಗಪ್ಪ ನಾಯಕ, ಜೆ.ಕೆ.ಬಾತಿ, ಶಿವಕುಮಾರ ಸೇರಿದಂತೆ ವಿಜ್ಞಾನ ಮತ್ತು ಗಣಿತ ಶಿಕ್ಷಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.