ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಮಟ್ಟಕ್ಕೆ ಜಿಲ್ಲೆಯ ವಿದ್ಯಾರ್ಥಿಗಳು ಆಯ್ಕೆ

Last Updated 12 ಆಗಸ್ಟ್ 2021, 14:11 IST
ಅಕ್ಷರ ಗಾತ್ರ

ಹಾವೇರಿ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜರುಗಿದ 28ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಿದ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲೆಯ 10 ಪುಟಾಣಿ ವಿಜ್ಞಾನಿಗಳು ರಾಜ್ಯಮಟ್ಟದ ‘ತಾವೂ ತಯಾರಿಸಿ’ ಯೋಜನೆಯನ್ನು ಆನ್‌ಲೈನ್ ಮೂಲಕ ಮಂಡಿಸಿದ್ದರು. ಈಪೈಕಿ ರಾಣೆಬೆನ್ನೂರ ತಾಲ್ಲೂಕಿನ ಹೊಸಹೂಲಿಹಳ್ಳಿ ಸರ್ಕಾರಿ ಪ್ರೌಢಶಾಲೆ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿ ಕೀರ್ತಿ ಮಡಿವಾಳರ ‘ಕೃಷಿ ತ್ಯಾಜ್ಯ ಕಸವಲ್ಲ ರಸ’ ಎಂಬ ಯೋಜನಾ ಶೀರ್ಷಿಕೆಯೊಂದಿಗೆ ರೇಖಾ ಕೆ.ಬಿ. ಮಾರ್ಗದರ್ಶನದಲ್ಲಿ ತಯಾರಿಸಿದ್ದರು.

ಕುಮಾರಪಟ್ಟಣಂ ಆದಿತ್ಯ ಬಿರ್ಲಾ ಪಬ್ಲಿಕ್ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿ ಯೋಗೇಶಗೌಡ ಪಾಟೀಲ ‘ಎಕೋ ಸೇಫ್‌ ಸಿಟಿ’ ಎಂಬ ಶೀರ್ಷಿಕೆಯಲ್ಲಿ ಯೋಜನೆಯನ್ನು ಸಂತೋಷ ಬಾರ್ಕಿ ಅವರ ಮಾರ್ಗದರ್ಶನದಲ್ಲಿ ತಯಾರಿಸಿ ಮಂಡಿಸಿದ್ದರು.

ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಹಾಗೂ ಮಾರ್ಗದರ್ಶಿ ಶಿಕ್ಷಕರನ್ನು ಆ.17ರಂದು ಬೆಂಗಳೂರಿನ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಪ್ರೊ.ಎಂ.ಎ. ಸೇತುತಾವ್ ಸಭಾಂಗಣದಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.
ಉನ್ನತ ಶಿಕ್ಷಣ, ಐಟಿ-ಬಿಟಿ, ಎಎಸ್.ಟಿ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಭಾಗವಹಿಸಲಿದ್ದಾರೆ ಎಂದು ಮಕ್ಕಳ ವಿಜ್ಞಾನ ಸಮಾವೇಶದ ಜಿಲ್ಲಾ ಘಟಕದ ಸಂಯೋಜಕ ಜಿ.ಎಸ್. ಹತ್ತಿಮತ್ತೂರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT