ಭಾನುವಾರ, ಜನವರಿ 26, 2020
13 °C

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗಳಿಗೆ ಜೈಲು ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗಳಾದ ಫಕ್ಕೀರೇಶನಿಗೆ 10 ವರ್ಷಗಳ ಜೈಲುಶಿಕ್ಷೆ ಹಾಗೂ  ಬಸವರಾಜ ರಾಮಪ್ಪ ಸಣ್ಣಪ್ಪನವರಗೆ ಏಳು ವರ್ಷಗಳ ಶಿಕ್ಷೆ ಹಾಗೂ ದಂಡ ವಿಧಿಸಿ ಒಂದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ (ಪೋಕ್ಸೊ) ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆದೇಶ ನೀಡಿದ್ದಾರೆ.

ಬಾಲಕಿಯನ್ನು ನಿತ್ಯ ಶಾಲೆಗೆ ವಾಹನದಲ್ಲಿ ಬಿಡುವುದು ಹಾಗೂ ಕರೆತರುವ ಮೂಲಕ ಪರಿಚಯ ಮಾಡಿಕೊಂಡ ಫಕ್ಕೀರೇಶ ಈರಪ್ಪ ಕಾಮನಹಳ್ಳಿ ಹಾಗೂ ಬಸವರಾಜ ರಾಮಪ್ಪ ಸಣ್ಣಪ್ಪನವರ ಎಂಬುವವರು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೀರು ಕೇಳುವ ನೆಪದಲ್ಲಿ ಹೋಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಶಿಗ್ಗಾವಿ ವೃತ್ತ ನಿರೀಕ್ಷಕರು ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪೋಕ್ಸೊ ಕಾಯ್ದೆಯಡಿ ಅಪರಾಧಿಗಳಿಗೆ ಶಿಕ್ಷೆ ವಿಧಿಸಲಾಗಿದ್ದು, ಸಂತ್ರಸ್ತೆಗೆ ಪರಿಹಾರವಾಗಿ ₹ 15 ಸಾವಿರ ನೀಡಲು ಆದೇಶಿಸಲಾಗಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ವಿನಾಯಕ ಎಸ್.ಪಾಟೀಲ ವಾದ ಮಂಡಿಸಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು