ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಾಲಕನಿಗೆ 10 ವರ್ಷ ಕಠಿಣ ಶಿಕ್ಷೆ

Last Updated 10 ಡಿಸೆಂಬರ್ 2021, 13:57 IST
ಅಕ್ಷರ ಗಾತ್ರ

ಹಾವೇರಿ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನಿಗೆ 10 ವರ್ಷಗಳ ಕಠಿಣ ಶಿಕ್ಷೆಹಾಗೂ ₹5 ಸಾವಿರ ದಂಡ ವಿಧಿಸಿ ಜಿಲ್ಲಾ ಸೆಷನ್ಸ್‌ ಎಫ್.ಟಿ.ಎಸ್.ಸಿ-1 (ಪೋಕ್ಸೊ) ವಿಶೇಷ ನ್ಯಾಯಾಲಯದ ಹಾಗೂ ಮಕ್ಕಳ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್.ಜ್ಯೋತಿಶ್ರೀ ತೀರ್ಪು ನೀಡಿದ್ದಾರೆ.

ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ಜನವರಿ 2018ರಂದು ಬಾಲಕಿಗೆ ಊಟದ ಆಮಿಷ ತೋರಿಸಿ, ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದ ಕುರಿತು ದೂರು ದಾಖಲಿಸಲಾಗಿತ್ತು. ಪೊಲೀಸ್ ವೃತ್ತ ನಿರೀಕ್ಷಕರು ಪ್ರಕರಣದ ತನಿಖೆ ನಡೆಸಿ, ಆರೋಪಿ ವಿರುದ್ಧ ಸಾಕ್ಷಾಧಾರಗಳು ದೃಢಪಟ್ಟಿದ್ದರಿಂದ ಬಾಲ ನ್ಯಾಯಮಂಡಳಿಗೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ನಂತರ ಈ ಪ್ರಕರಣವು ಮಕ್ಕಳ ನ್ಯಾಯಾಲಯಕ್ಕೆ ವರ್ಗಾವಣೆಯಾಗಿತ್ತು.

ಸರ್ಕಾರದ ಪರವಾಗಿ ಜಿಲ್ಲಾ ಸೆಷನ್ಸ್‌ ಎಫ್.ಟಿ.ಎಸ್.ಸಿ-1 (ಪೊಕ್ಸೊ) ವಿಶೇಷ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾದ ವಿನಾಯಕ ಎಸ್.ಪಾಟೀಲ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT