ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಣೆಬೆನ್ನೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ– ಗ್ರಾಮಸ್ಥರಿಂದ ಧರ್ಮದೇಟು

Published 10 ಜನವರಿ 2024, 21:00 IST
Last Updated 10 ಜನವರಿ 2024, 21:00 IST
ಅಕ್ಷರ ಗಾತ್ರ

ರಾಣೆಬೆನ್ನೂರು: ಎಂಟು ವರ್ಷದ ಬಾಲಕಿೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ್ದಾನೆ ಎಂಬ ಕಾರಣಕ್ಕೆ 40 ವರ್ಷದ ವ್ಯಕ್ತಿಯೊಬ್ಬರನ್ನು ಅರೆಬೆತ್ತಲೆಗೊಳಿಸಿ ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ತಾಲ್ಲೂಕಿನ ಗ್ರಾಮವೊಂದರಲ್ಲಿ ಬುಧವಾರ ನಡೆದಿದೆ.

ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಗ್ರಾಮೀಣ ಠಾಣೆ ಪೊಲೀಸರು ಪರೀಶಿಲನೆ ನಡೆಸಿ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಕ್ಸೊ ಕಾಯ್ದೆಯಡಿ ಆರೋಪಿಯನ್ನು ಬಂಧಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT