ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

Published 22 ಡಿಸೆಂಬರ್ 2023, 23:30 IST
Last Updated 22 ಡಿಸೆಂಬರ್ 2023, 23:30 IST
ಅಕ್ಷರ ಗಾತ್ರ

ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿ ಅರ್ಜುನ ಹನುಮಂತಪ್ಪ ಎಂಬುವರಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹1.05 ಲಕ್ಷ ದಂಡ ವಿಧಿಸಿ ಹಾವೇರಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ಎಫ್.ಟಿ.ಎಸ್.ಸಿ-1 ನ್ಯಾಯಾಧೀಶ ನಿಂಗೌಡ ಪಾಟೀಲ ಆದೇಶ ನೀಡಿದ್ದಾರೆ. 

ಈ ದಂಡದ ಹಣದಲ್ಲಿ ನೊಂದ ಬಾಲಕಿಗೆ ₹80 ಸಾವಿರ ಪರಿಹಾರ ಹಾಗೂ ಕರ್ನಾಟಕ ಸರ್ಕಾರದ ನೊಂದವರ ಪರಿಹಾರ ನಿಧಿಯಿಂದ ₹4 ಲಕ್ಷ ಪರಿಹಾರ ನೀಡಬೇಕೆಂದು ಆದೇಶಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಷಂಶಿಪುರ ಗ್ರಾಮದ ಅರ್ಜುನ ತಂದೆ ಹನುಮಂತಪ್ಪ ಎಂಬಾತ 2021ರ ಜೂನ್‌ 7ರಂದು ಬೈಕ್ ಮೇಲೆ ಬಂದು ಬಾಲಕಿಯನ್ನು ಅಪಹರಣ ಮಾಡಿಕೊಂಡು ಹರಿಹರ ತಾಲ್ಲೂಕಿನ ಗುತ್ತೂರ ಗ್ರಾಮದ ಮನೆಯೊಂದರಲ್ಲಿ 2021 ಜೂನ್‌ 8ರಿಂದ 15ರವರೆಗೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಕ್ಕಾಗಿ ಹಾವೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಹಾವೇರಿ ಉಪವಿಭಾಗದ ತನಿಖಾಧಿಕಾರಿ ಸಿಪಿಐ ಚಿದಾನಂದ ಸಿ. ಅವರು ಪ್ರಕರಣದ ತನಿಖೆ ನಡೆಸಿ, ದೋಷರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ವಿಜಯಕುಮಾರ ಪಾಟೀಲ ಅವರು ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT