ಹಾವೇರಿ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 20 ವರ್ಷಗಳ ಕಠಿಣ ಸಜೆ ಹಾಗೂ 20 ಸಾವಿರ ದಂಡ ವಿಧಿಸಿ ಜಿಲ್ಲಾ ಸೆಷನ್ಸ್ ಎಫ್.ಟಿ.ಎಸ್-1 (ಪೊಕ್ಸೊ) ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್.ಜ್ಯೋತಿಶ್ರೀ ಬುಧವಾರ ತೀರ್ಪು ನೀಡಿದ್ದಾರೆ.
ಪರಶುರಾಮ ಹೇಮಪ್ಪ ಕೆಂಚಮ್ಮನವರ (34) ಶಿಕ್ಷೆಗೊಳಗಾದವ. ಈತಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು 2019ರಲ್ಲಿ ಟಿ.ವಿ ತೋರಿಸುವುದಾಗಿ ಪುಸಲಾಯಿಸಿ ತನ್ನ ತಮ್ಮನ ಮನೆಗೆ ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ವಿನಾಯಕ ಎಸ್.ಪಾಟೀಲ ವಾದ ಮಂಡಿಸಿದ್ದರು.
ಬಾಲಕಿ ಅಪಹರಣ: ಶಿಕ್ಷಕನಿಗೆ ಶಿಕ್ಷೆ
ಹಾವೇರಿ: ಬಾಲಕಿಯನ್ನು ಲೈಂಗಿಕ ಉದ್ದೇಶದಿಂದ ಅಪಹರಿಸಿ, ಆಕೆಯ ಜತೆ ಅಸಭ್ಯವಾಗಿ ವರ್ತಿಸಿ ಹಿಂಸೆ ನೀಡಿದ್ದ ಅಪರಾಧಿ ಶಿವರಾಜ ಗಂಗಾಧರ ಶಿರಹಟ್ಟಿ ಎಂಬಾತನಿಗೆ ಆರು ವರ್ಷಗಳ ಕಠಿಣ ಶಿಕ್ಷೆ ಹಾಗೂ ಏಳು ಸಾವಿರ ದಂಡ ವಿಧಿಸಿ ಜಿಲ್ಲಾ ಸೆಷನ್ಸ್ ಎಫ್.ಟಿ.ಎಸ್-1 (ಪೊಕ್ಸೊ) ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್. ಜ್ಯೋತಿಶ್ರೀ ಮಂಗಳವಾರ ತೀರ್ಪು ನೀಡಿದ್ದಾರೆ.
ಹಾನಗಲ್ ತಾಲ್ಲೂಕಿನ ಶಾಲೆಯೊಂದರಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯನ್ನು ಚಿತ್ರಕಲಾ ಶಿಕ್ಷಕ ಶಿವರಾಜ ಗಂಗಾಧರ ಶಿರಹಟ್ಟಿ 2017ರಲ್ಲಿ ಹಿಂದಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಕೊಡುವುದಾಗಿ ಪುಸಲಾಯಿಸಿ ಅಪಹರಿಸಿದ್ದ.
ಹಾನಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.