ಹಾವೇರಿ: ಲೈಂಗಿಕ ದೌರ್ಜನ್ಯ; ಅಪರಾಧಿಗೆ 10 ವರ್ಷ ಜೈಲು

ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಹಾನಗಲ್ ತಾಲ್ಲೂಕಿನ ಯಳ್ಳೂರ ಗ್ರಾಮದ ಸುನೀಲಗೌಡ ಮಹಾದೇವಗೌಡ ಪಾಟೀಲ ಎಂಬಾತನಿಗೆ 10 ವರ್ಷಗಳ ಕಠಿಣ ಕಾರಾಗೃಹ ಸಜೆ ಹಾಗೂ ₹7 ಸಾವಿರ ದಂಡ ವಿಧಿಸಿ ಗುರುವಾರ ಹೆಚ್ಚುವರಿ ಜಿಲ್ಲಾ ಸೆಷನ್ಸ್ ಎಫ್.ಟಿ.ಎಸ್.ಸಿ.-1(ಪೊಕ್ಸೊ) ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್. ಜ್ಯೋತಿಶ್ರೀ ಆದೇಶ ನೀಡಿದ್ದಾರೆ.
ಆರೋಪಿ ಸುನೀಲಗೌಡ ಬಾಲಕಿಯನ್ನು ಪ್ರೀತಿಸುತ್ತಿರುವುದಾಗಿ ಹೇಳಿ, ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಹಾನಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಠಾಣೆಯ ಇನ್ಸ್ಪೆಕ್ಟರ್ ರೇವಪ್ಪ ಕಟ್ಟಿಮನಿ ಅವರು ಪ್ರಕರಣದ ತನಿಖೆ ನಡೆಸಿ ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಸಂತ್ರಸ್ತೆಗೆ ₹5 ಲಕ್ಷ ಪರಿಹಾರ ನೀಡಲು ಆದೇಶಿಸಿ ತೀರ್ಪು ನೀಡಿದ್ದಾರೆ ಎಂದು ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಾದಮಂಡಿಸಿದ ವಿಶೇಷ ಸರ್ಕಾರಿ ಅಭಿಯೋಜಕ ವಿನಾಯಕ ಎಸ್. ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.