ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜನರಿಗೆ ಮೋಸ ಮಾಡಿದ ಬಿಜೆಪಿ: ಈಶ್ವರ ಖಂಡ್ರೆ

ಕಾಂಗ್ರೆಸ್ ಸಮಾವೇಶ
Published : 21 ಸೆಪ್ಟೆಂಬರ್ 2024, 16:28 IST
Last Updated : 21 ಸೆಪ್ಟೆಂಬರ್ 2024, 16:28 IST
ಫಾಲೋ ಮಾಡಿ
Comments

ಶಿಗ್ಗಾವಿ: ‘ಭ್ರಷ್ಟಾಚಾರ, ಸುಳ್ಳು ಆರೋಪ, ಹಲವು ಹಗರಣದಲ್ಲಿ ಸಿಲುಕಿದ್ದ ಬಿಜೆಪಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕಾಂಗ್ರೆಸ್ ಬೂತ್ ಮಟ್ಟದ ಸದಸ್ಯರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

‘ಬಿಜೆಪಿ, ಜೆಡಿಎಸ್ ಅಪವಿತ್ರ ಮೈತ್ರಿ ಹಾರಾಟ ನಡೆಯದು. ಕೋವಿಡ್‌ ಸಮಯದಲ್ಲಿ ಕಮಿಷನ್‌ ರೂಪದಲ್ಲಿ ಲೂಟಿ ಮಾಡಿದ್ದಾರೆ. ಸಂವಿಧಾನ ತಿದ್ದುಪಡಿ, ಸುಳ್ಳು ಪ್ರಕರಣ ದಾಖಲು, ಜಾತಿ–ಜಾತಿಗಳ ನಡುವೆ ವಿಷ ಬೀಜ ಬಿತ್ತುವುದು, ಪಕ್ಷಪಾತದ ಮೂಲಕ ಮತದಾರರಿಗೆ ಮೋಸ ಮಾಡಿವೆ’ ಎಂದರು.

ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ‘ಪಕ್ಷ ವಿರೋಧಿ ಚಟುವಟಿಕೆ ಮಾಡುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು. ಜನರು ಕಾಂಗ್ರೆಸ್ ಪರವಿದ್ದು, ಅದರಿಂದಾಗಿಯೇ ಪಕ್ಷದ ಗೆಲುವು ಸಾಧ್ಯವಾಗಿದೆ’ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಮಾತನಾಡಿ, ‘ಪಕ್ಷದ ಮುಖಂಡರು ಒಗ್ಗಟ್ಟು ಪ್ರದರ್ಶನವಾಗಬೇಕು. ಅದರಿಂದ ಪಕ್ಷ ಪ್ರಬಲವಾಗಿ ಬೆಳೆಯಲು ಸಾಧ್ಯವಿದೆ. ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ’ ಎಂದು ಹೇಳಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಯೂರ ಜೈಕುಮಾರ, ಶಾಸಕರಾದ ವಿನಯ ಕುಲಕರ್ಣಿ, ಶ್ರೀನಿವಾಸ ಮಾನೆ, ಮುಖಂಡರಾದ ಎಸ್.ಆರ್.ಪಾಟೀಲ, ಎಸ್.ಆಂಜನೇಯ, ಸಲಿಂ ಅಹ್ಮದ, ವಸಂತಕುಮಾರ, ವಿನಯ ಕುಮಾರ, ಬಸವರಾಜ ಶಿವಣ್ಣವರ, ಮಾಜಿ ಸಂಸದ ಎಂ.ಸಿ.ಕುನ್ನೂರ ಮಾತನಾಡಿದರು.

ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕ ಪ್ರಕಾಶ ಕೋಳಿವಾಡ, ಯು.ಬಿ.ಬಣಕಾರ, ರಾಜ್ಯ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕಾಂಗ್ರಸ್ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಆರ್. ಶಂಕರ, ಐ.ಜಿ.ಸನದಿ, ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಸಿ.ಪಾಟೀಲ, ಸವಣೂರ ತಾಲ್ಲೂಕು ಘಟಕದ ಅಧ್ಯಕ್ಷ ಎಂಜೆ.ಮುಲ್ಲಾ, ಬಂಕಾಪುರ ಪುರಸಭೆ ಅಧ್ಯಕ್ಷೆ ಮಮತಾ ಮಾಗಿ ಇದ್ದರು.

‘ಬೊಮ್ಮಾಯಿ ಕೊಡುಗೆ ಶೂನ್ಯ’
ಮೈಸೂರು ಶಿವಮೊಗ್ಗ ಕಲಬುರ್ಗಿ ಕ್ಷೇತ್ರ ನೋಡಿದರೆ ಈ ಕ್ಷೇತ್ರ ಅತ್ಯಂತ ಹಿಂದುಳಿದಿದೆ. ಸಂಸದ ಬಸವರಾಜ ಬೊಮ್ಮಾಯಿ ಅವರ ಆಡಳಿತ ಕ್ಷೇತ್ರವೆಂದು ಹೇಳಲು ನಾಚಿಕೆಯಾಗುತ್ತದೆ.  ಬೊಮ್ಮಾಯಿ ಮಾಡಿದ ಅಭಿವೃದ್ಧಿ ಶೂನ್ಯವಾಗಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಮುನಿರತ್ನ ಅವರನ್ನು ಸಮರ್ಥಿಸಿಕೊಳ್ಳುವುದು ಸರಿಯಲ್ಲ.
–ಜಿ.ಸಿ.ಚಂದ್ರಶೇಖರ ಕಾಂಗ್ರೆಸ್ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT