ಶಿಗ್ಗಾವಿ: ರೋಗರುಜಿನಗಳ ತಡೆಗೆ ಪ್ರತಿಯೊಬ್ಬರು ಮುಂಜಾಗ್ರತಾ ಕ್ರಮ ವಹಿಸುವುದು ಮುಖ್ಯವಾಗಿದೆ. ಅದರಿಂದ ಆರೋಗ್ಯಯುತ ನಾಡು ನಿರ್ಮಾಣವಾಗಲು ಸಾಧ್ಯವಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸತೀಶ ಎ.ಆರ್. ಹೇಳಿದರು.

ಪಟ್ಟಣದ ರಂಭಾಪುರಿ ಪದವಿ ಕಾಲೇಜಿನಲ್ಲಿ ಇತ್ತೀಚೆಗೆ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ನಡೆದ ರಾಷ್ಟ್ರೀಯ ಡೆಂಗಿ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ರೋಗಗಳ ಲಕ್ಷಣಗಳನ್ನು ತಿಳಿದು ಸೂಕ್ತ ಚಿಕಿತ್ಸೆ ಪಡೆಯಬೇಕು. ರೋಗಗಳ ಕುರಿತು ಯಾವುದೆ ಸಕೋಚಿತ ಮನೋಭಾವನೆ ಮಾಡಬಾರದು. ರೋಗಗಳು ಉಲ್ಭಣವಾಗುವ ಮುಂಚೆಯೇ ಚಿಕಿತ್ಸೆ ಪಡೆದು ಆರೋಗ್ಯವಂತರಾಗಬೇಕು ಎಂದರು.

ರಂಭಾಪುರಿ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಲಿಂಗಯ್ಯ ಎ.ಹಿರೇಮಠ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಾ.ಅಶೋಕಕುಮಾರ, ಕೆ.ಎಸ್ ಅವರು ಡೆಂಗಿ ನಿಯಂತ್ರಣ ಕುರಿತು ಉಪನ್ಯಾಸ ನೀಡಿದರು. ಫಾರ್ಮಸಿ ಅಧಿಕಾರಿ ಆನಂದಗೌಡ ಹಿರೇಗೌಡ್ರ ಅವರು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು.

ರಂಭಾಪುರಿ ಪದವಿ ಕಾಲೇಜಿನ ಪ್ರಾಚಾರ್ಯ ಬಿ.ವೈ.ತೊಂಡಿಹಾಳ, ರೆಡ್ ಕ್ರಾಸ್ ಘಟಕದ ಅಧಿಕಾರಿ ಚಾಂದಬೀಬಿ ನದಾಫ್, ಆರೋಗ್ಯ ಇಲಾಖೆ ನೌಕರ ಕುಶಾಲ ಕುಂದಗೋಳ, ಎಸ್.ಸಿ.ಕೋರಿ, ದೀಪಾ ಉಣಕಲ್, ನಾಗನಗೌಡ ಪಾಟೀಲ, ಮಲ್ಲಿಕಾರ್ಜುನ ಕೊಣ್ಣೂರು ಕೊನ್ನೂರ ಸೇರಿದಂತೆ ಕಾಲೇಜಿನ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-22-1123249413

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.