ಶಿಗ್ಗಾವಿ: ದೇಹದ ಅವಶ್ಯಕತೆಗೆ ತಕ್ಕಂತೆ ಆಹಾರ ಸೇವನೆ ಮಾಡಿದರೆ ಆರೋಗ್ಯಯುತ ಸಮಾಜ ಕಟ್ಟಲು ಸಾಧ್ಯ. ಹೊರತು, ನಾಲಿಗೆಯ ರುಚಿಗೆ ಜೋತುಬಿದ್ದು ತಿಂದರೆ ಆರೋಗ್ಯ ಹದಗೆಡುತ್ತಿದೆ ಎಂಬುದನ್ನು ಮರೆಯಬಾರದು ಎಂದು ವೈದ್ಯೆ ಡಾ.ಲತಾ ನಿಡಗುಂದಿ ಹೇಳಿದರು.

ಪಟ್ಟಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ವಿಶ್ವ ಆರೋಗ್ಯ ದಿನಾಚರಣೆಯ ಆರೋಗ್ಯ ಸಪ್ತಾಹದ ಅಂಗವಾಗಿ ನಡೆದ ‘ಆರೋಗ್ಯಕರ ಜೀವನ ಶೈಲಿ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾವು ವಾಸಿಸುವ ಪ್ರದೇಶಕ್ಕೆ ಅನುಸಾರವಾಗಿ ನಮ್ಮ ಆಹಾರ ಪದ್ಧತಿಯನ್ನು ಮೈಗೂಡಿಸಿಕೊಳ್ಳಬೇಕು, ಇಂದಿನ ಯುವಕರು ಪಾಶ್ಮಿಮಾತ್ಯ ಫಾಸ್ಟ್ಫುಡ್ ಸಂಸ್ಕೃತಿಯ ಗೀಳನ್ನು ಮೈಗೂಡಿಸಿಕೊಂಡಿದ್ದರಿಂದಲೇ ಅವರಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಎ.ಸಿ.ವಾಲಿ ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಪ್ರೊ. ಆನಂದ ಇಂದೂರ , ಯೂತ್ ರೆಡ್ಕ್ರಾಸ್ ಘಟಕದ ಸಂಚಾಲಕ ಆರ್.ಪಿ.ನದಾಫ್ , ವಿನಯ ಕುಲಕರ್ಣಿ ವಂದಿಸಿದರು. ಪ್ರೊ. ಶೈಲಜಾ ಹುದ್ದಾರ, ಮುತ್ತು ಸುಣಗಾರ, ಮೇಘ ಚಲವಾದಿ, ಲತಾ ಕೋಪರ್ಡೆ, ಪ್ರಬಲ ದೊಡ್ಡಣ್ಣನವರ, ಪ್ರೊ.ಇಮ್ತಿಯಾಜ್ ಖಾನ್, ಪ್ರೊ. ಚೇತನ್ ಬಿಂಗಾಪುರ ಸೇರಿದಂತೆ ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿ ಇದ್ದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-22-428557763

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.